ದೇಶ

ಕೋರ್ಟ್ ಆವರಣದಲ್ಲೇ ವಕೀಲರ ಹತ್ಯೆ: ಉತ್ತರ ಪ್ರದೇಶದಲ್ಲಿ ಯಾರೂ ಸುರಕ್ಷಿತವಲ್ಲ ಎಂದ ಪ್ರಿಯಾಂಕಾ ಗಾಂಧಿ

Lingaraj Badiger

ಶಹಜಹಾನ್ ಪುರ: ರಾಜ್ಯದ ಶಹಜಹಾನ್ ಪುರ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬೆನ್ನಲ್ಲೇ, ಉತ್ತರ ಪ್ರದೇಶದಲ್ಲಿ ಯಾರೂ ಸುರಕ್ಷಿತವಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಹೇಳಿದ್ದಾರೆ.

"ಕಾನೂನು ಮತ್ತು ನ್ಯಾಯಾಂಗ ನಮ್ಮ ಪ್ರಜಾಪ್ರಭುತ್ವದ ಅವಿಭಾಜ್ಯ ಆಧಾರ ಸ್ತಂಭವಾಗಿದೆ. ಶಹಜಹಾನ್ಪುರದ ನ್ಯಾಯಾಲಯದ ಆವರಣದಲ್ಲಿ ಹಗಲು ಹೊತ್ತಿನಲ್ಲಿ ವಕೀಲರ ಬರ್ಬರ ಹತ್ಯೆಯಾಗಿದೆ. ಇಂದಿನ ಉತ್ತರ ಪ್ರದೇಶದಲ್ಲಿ, ಮಹಿಳೆಯರು, ರೈತರು ಹಾಗೂ ವಕೀಲರು ಸೇರಿದಂತೆ ಯಾರೂ ಸುರಕ್ಷಿತವಾಗಿಲ್ಲ ಎನ್ನುವುದನ್ನು ನೆನಪಿಸುತ್ತದೆ" ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮೂಲಕ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗೂಂಡಾಗಳು ಮತ್ತು ದುಷ್ಕರ್ಮಿಗಳು ರಾಜ್ಯದಿಂದ ಪಲಾಯನ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ಹೇಳುತ್ತಿದ್ದರು. ಆದರೆ ಇಲ್ಲಿ ಅವರು ನ್ಯಾಯಾಲಯಕ್ಕೆ ನುಗ್ಗಿ ವಕೀಲರನ್ನು ಕೊಲ್ಲುತ್ತಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

"ಬಿಜೆಪಿ ಆಡಳಿತದಲ್ಲಿ ಯಾವುದೇ ಸಾಮಾನ್ಯ ವ್ಯಕ್ತಿಯೂ ಸುರಕ್ಷಿತವಾಗಿಲ್ಲ ಎಂದು ಷಹಜಹಾನ್ ಪುರ್ ಘಟನೆಯು ಮತ್ತೊಮ್ಮೆ ಸಾಬೀತುಪಡಿಸಿದೆ. ಆದರೆ ರಾಜ್ಯ ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಧಾರಿಸುವ ಬದಲು ಸುಳ್ಳುಗಳನ್ನು ಹರಡುತ್ತಿದೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರೋಪಿಸಿದ್ದಾರೆ.

SCROLL FOR NEXT