ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಕೋರ್ಟ್​ನಲ್ಲೇ ದುಷ್ಕರ್ಮಿಗಳಿಂದ ವಕೀಲನ ಗುಂಡಿಕ್ಕಿ ಹತ್ಯೆ

ಭೂಪೇಂದ್ರ ಪ್ರತಾಪ್ ಸಿಂಗ್ ಎಂಬ ವಕೀಲರನ್ನು ನ್ಯಾಯಾಲಯದ ಮೂರನೇ ಮಹಡಿಯಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಶಹಜಾನ್​ಪುರದಲ್ಲಿ ನಡೆದಿದೆ.

ಶಹಜಾನ್​ಪುರ​: ಭೂಪೇಂದ್ರ ಪ್ರತಾಪ್ ಸಿಂಗ್ ಎಂಬ ವಕೀಲರನ್ನು ನ್ಯಾಯಾಲಯದ ಮೂರನೇ ಮಹಡಿಯಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಶಹಜಾನ್​ಪುರದಲ್ಲಿ ನಡೆದಿದೆ.

ಶಹಜಾನ್​ಪುರ ಸಿವಿಲ್​ ಕೋರ್ಟ್​​ನ ಮೂರನೇ ಮಹಡಿಯಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಸದರ್ ಪೊಲೀಸರು ಬಂದೂಕನ್ನು ವಶಪಡಿಸಿಕೊಂಡಿದ್ದಾರೆ. ಇನ್ನೂ ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡವನ್ನು ರಚನೆ ಮಾಡಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಜಲಾಲಾಬಾದ್ ತಹಸಿಲ್‌ನ ವಕೀಲ ಭೂಪೇಂದ್ರ ಸಿಂಗ್(38) ಅವರು ಜಿಲ್ಲಾ ನ್ಯಾಯಾಲಯದ ಎಸಿಜೆಎಂ -1ರ ಮೂರನೇ ಮಹಡಿಯ ಕಚೇರಿಯಲ್ಲಿ ಗುಮಾಸ್ತರನ್ನು ಭೇಟಿ ಮಾಡಲು ಬಂದಾಗ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ) ಎಸ್ ಆನಂದ್ ಅವರು ಹೇಳಿದ್ದಾರೆ. 

ಹತ್ಯೆಯಾದ ಸ್ಥಳದಲ್ಲಿ ಬೇರೆ ಯಾರೂ ಇರಲಿಲ್ಲವಾದ್ದರಿಂದ, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ತಕ್ಷಣಕ್ಕೆ ತಿಳಿದು ಬಂದಿಲ್ಲ. ಹಿರಿಯ ಅಧಿಕಾರಿಗಳು ಮತ್ತು ತನಿಖಾ ತಂಡಗಳು ಸ್ಥಳದಲ್ಲಿದ್ದು, ಪರಿಶೀಲನೆ ನಡೆಸುತ್ತಿವೆ ಎಂದು ಆನಂದ್ ಅವರು ತಿಳಿಸಿದ್ದಾರೆ.

ಕೊಲೆಯ ಹಿಂದಿನ ಉದ್ದೇಶವೇನು ಎಂಬುದರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಹಳೇ ವೈಷಮ್ಯದಿಂದಾಗಿ ಕೃತ್ಯವೆಸಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT