ಸಂಗ್ರಹ ಚಿತ್ರ 
ದೇಶ

ರಾಜ್ಯಗಳ ಬಳಿ ಇನ್ನೂ 10.42 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ: ಕೇಂದ್ರ ಸರ್ಕಾರ

ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳ ಹಾಗೂ ಖಾಸಗಿ ಆಸ್ಪತ್ರೆಗಳ ಬಳಿ 10.42 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಹೇಳಿದೆ.

ನವದೆಹಲಿ: ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳ ಹಾಗೂ ಖಾಸಗಿ ಆಸ್ಪತ್ರೆಗಳ ಬಳಿ 10.42 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಹೇಳಿದೆ.

ಈವರೆಗೆ ಕೇಂದ್ರವು ರಾಜ್ಯಗಳಿಗೆ 102.5 (1,02,05,09,915) ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದ ಒಟ್ಟು 10,42,38,220 ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 98,67,69,411 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್