ದ್ವಾರಕಾ: ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಮಾಜಿ ಪ್ರಿಯಕರ
ಯುವತಿ ಯುವಕನ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಆಕೆಯ ಮೇಲೆ ಹಲ್ಲೆ ಮಾಡಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದ್ವಾರಕಾದಲ್ಲಿ ನಡೆದಿದೆ.
ನವದೆಹಲಿ: ಯುವತಿ ಯುವಕನ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಆಕೆಯ ಮೇಲೆ ಹಲ್ಲೆ ಮಾಡಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದ್ವಾರಕಾದಲ್ಲಿ ನಡೆದಿದೆ.
ದ್ವಾರಕಾದಲ್ಲಿರುವ ಮಹಿಳೆಯ ಮನೆಯ ಬಳಿ ಆಕೆಯ ಮೇಲೆ ಹಲ್ಲೆ ಮಾಡಿ, ಚಾಕುವಿನಿಂದ ಇರಿದು ಕೊಲೆಗೈಯಲಾಗಿದೆ. ಪೊಲೀಸರ ಪ್ರಕಾರ, ಡಾಲಿ ಬಬ್ಬರ್ಗೆ ವ್ಯಕ್ತಿ ಕನಿಷ್ಠ ಆರು ಬಾರಿಯಾದ್ರೂ ಇರಿದಿದ್ದಾನೆ. ಸೋಮವಾರ ರಾತ್ರಿ ರಕ್ತದ ಮಡುವಿನಲ್ಲಿ ಯುವತಿ ಬಿದ್ದಿದ್ದಾಳೆ.
ಆರೋಪಿ ಈ ಹಿಂದೆಯೂ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದ ಎಂದು ಆಕೆಯ ಕುಟುಂಬಸ್ಥರು ಹೇಳಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಮೂವರು ಪುರುಷರು ಮಹಿಳೆ ಜೊತೆ ನಿಂತಿದ್ದಾರೆ. ನಂತರ ಅವರಲ್ಲಿ ಒಬ್ಬ ಅವಳಿಗೆ ಚಾಕುವಿನಿಂದ ಇರಿಯಲು ಆರಂಭಿಸಿದ್ದಾನೆ. ಈ ವೇಳೆ ಇತರರು ನೋಡುತ್ತಿದ್ದರು. ಅಲ್ಲಿನ ಸ್ಥಳೀಯರು ಮಹಿಳೆಯ ಕಿರುಚಾಟವನ್ನು ಕೇಳಿದರೂ, ಯಾರೂ ಆಕೆಗೆ ಸಹಾಯ ಮಾಡಲಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.