ಆರ್ಯನ್ ಖಾನ್ ನನ್ನು ವಿಚಾರಣೆಗೆ ಕರೆದೊಯ್ಯುತ್ತಿರುವ ಸಂಗ್ರಹ ಚಿತ್ರ 
ದೇಶ

ಕ್ರೂಸ್ ಡ್ರಗ್ಸ್ ಪ್ರಕರಣ: ಜಾಮೀನು ಕೋರಿ ಬಾಂಬೆ ಹೈಕೋರ್ಟ್‌ ಮೆಟ್ಟಿಲೇರಿದ ಆರ್ಯನ್ ಖಾನ್

ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರು...

ಮುಂಬೈ: ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರು ಬುಧವಾರ ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಇದಕ್ಕು ಮುನ್ನ ಆರ್ಯನ್ ಖಾನ್ ಅವರ ಜಾಮೀನು ಅರ್ಜಿಯನ್ನು ಇಲ್ಲಿನ ವಿಶೇಷ ಎನ್ ಡಿಪಿಎಸ್ ನ್ಯಾಯಾಲಯ ತಿರಸ್ಕರಿಸಿತ್ತು. ಆರ್ಯನ್ ಖಾನ್ ಪರ ವಕೀಲರು ತಕ್ಷಣವೇ ಎನ್ ಡಿಪಿಎಸ್ ವಿಶೇಷ ಕೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣ ಸಂಬಂಧ ಬಂಧಿತ ಆರ್ಯನ್ ಖಾನ್ ಮತ್ತು ಇನ್ನಿಬ್ಬರಿಗೆ ಜಾಮೀನು ನೀಡಲು ವಿಶೇಷ ನ್ಯಾಯಾಲಯ ಇಂದು ನಿರಾಕರಿಸಿದೆ.

ಈ ಪ್ರಕರಣದ ಆರೋಪಿ ಆರ್ಯನ್ ಖಾನ್ ಮತ್ತು ಇತರರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 8 (ಸಿ), 20 (ಬಿ), 27, 28, 29 ಮತ್ತು 35ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!