ಸಂಗ್ರಹ ಚಿತ್ರ 
ದೇಶ

ಕಲ್ಲಿನ ಬದಲು ಕಿಡ್ನಿಯನ್ನೇ ಹೊರ ತೆಗೆದ ವೈದ್ಯರು, ವ್ಯಕ್ತಿ ಸಾವು: 11 ಲಕ್ಷ ಪರಿಹಾರ ನೀಡುವಂತೆ ಸೂಚನೆ

ಗುಜರಾತ್ ನ ಮಹಿಸಾಗರ್ ಜಿಲ್ಲೆಯ ಬಾಲಸಿನೋರ್ ನಲ್ಲಿರುವ ಕೆಎಂಜಿ ಜನರಲ್​ ಆಸ್ಪತ್ರೆಯ ವೈದ್ಯರ ನಿರ್ಲಕ್ಷದಿಂದ ರೋಗಿಯೊಬ್ಬ ಪ್ರಾಣವನ್ನು ಕಳೆದುಕೊಂಡಿದ್ದಾನೆ. 

ಅಹಮದಾಬಾದ್: ಗುಜರಾತ್ ನ ಮಹಿಸಾಗರ್ ಜಿಲ್ಲೆಯ ಬಾಲಸಿನೋರ್ ನಲ್ಲಿರುವ ಕೆಎಂಜಿ ಜನರಲ್​ ಆಸ್ಪತ್ರೆಯ ವೈದ್ಯರ ನಿರ್ಲಕ್ಷದಿಂದ ರೋಗಿಯೊಬ್ಬ ಪ್ರಾಣವನ್ನು ಕಳೆದುಕೊಂಡಿದ್ದಾನೆ. 

ಈ ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಗೆ ಕಳೆದ ನಾಲ್ಕು ತಿಂಗಳಿನಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ವ್ಯಕ್ತಿಯ ಕಿಡ್ನಿಯಲ್ಲಿ ಸ್ಟೋನ್​ ಇದ್ದು, ಅದನ್ನು ತೆಗೆಯಲು ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಲು ಮುಂದಾಗಿದ್ದಾರೆ. ಆದರೆ ಶಸ್ತ್ರ ಚಿಕಿತ್ಸೆ ವೇಳೆ ಕಿಡ್ನಿಯಲ್ಲಿನ ಕಲ್ಲು ತೆಗೆಯುವ ಬದಲು ಕಿಡ್ನಿಯನ್ನೇ ತೆಗೆದಿದ್ದಾರೆ. ಇದರಿಂದ ರೋಗಿ ಮೃತಪಟ್ಟಿದ್ದಾನೆ.

ಡಾ. ಶಿವುಭಾಯಿ ಪಟೇಲ್​​ ನೇತೃತ್ವದ ತಂಡ ಅನೇಕ ವೈದ್ಯಕೀಯ ಪರೀಕ್ಷೆಗಳ ನಂತರ ಮೂತ್ರಪಿಂಡದಲ್ಲಿ 14ಎಂಎಂ ಕಲ್ಲು ಇರುವುದನ್ನ ಪತ್ತೆ ಮಾಡಿತ್ತು. ಸೆಪ್ಟೆಂಬರ್​​​ 3ರಂದು ಆತನಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಈ ವೇಳೆ ವೈದ್ಯರು ಕಿಡ್ನಿಯನ್ನೇ ತೆಗೆದಿದ್ದಾರೆ. ಬಳಿಕ ರೋಗಿಯ ಪ್ರಾಣವನ್ನು ಉಳಿಸಲು ಮೂತ್ರಪಿಂಡ ತೆಗೆಯುವುದು ಅನಿವಾರ್ಯವಾಗಿತ್ತು ಎಂದು ಹೇಳಿಕೊಂಡಿದ್ದರು.

ಆದರೆ ಅಹಮದಾಬಾದ್ ನ ಗ್ರಾಹಕ ನ್ಯಾಯಾಲಯವು ಆಸ್ಪತ್ರೆಯೊಂದಕ್ಕೆ 11.23 ಲಕ್ಷ ರೂ.ಗಳನ್ನು ಮೃತ ರೋಗಿಯ ಕುಟುಂಬಸ್ಥರಿಗೆ ಪರಿಹಾರವಾಗಿ ನೀಡುವಂತೆ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ