ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಗಳು 
ದೇಶ

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ; ಮೂವರು ಭದ್ರತಾ ಸಿಬ್ಬಂದಿಗಳಿಗೆ ಗಾಯ!

ಉತ್ತರ ಪ್ರದೇಶದ ಸಹರನ್ಪುರ್ ನಿಂದ ಕಾಶ್ಮೀರಕ್ಕೆ ವಲಸೆ ಬಂದಿದ್ದ  ಬಡಗಿಯ ಹತ್ಯೆ ಮಾಡಿದ್ದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಅ.20 ರಂದು ನಡೆದ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿವೆ.

ಶೋಪಿಯಾನ್: ಉತ್ತರ ಪ್ರದೇಶದ ಸಹರನ್ಪುರ್ ನಿಂದ ಕಾಶ್ಮೀರಕ್ಕೆ ವಲಸೆ ಬಂದಿದ್ದ  ಬಡಗಿಯ ಹತ್ಯೆ ಮಾಡಿದ್ದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಅ.20 ರಂದು ನಡೆದ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿವೆ.

ಶೋಪಿಯಾನ್ ನಲ್ಲಿ ಈ ಕಾರ್ಯಾಚರಣೆ ನಡೆದಿದ್ದು ಘಟನೆಯಲ್ಲಿ ಮೂವರು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. 

ಕಾಶ್ಮೀರ ಝೋನ್ ನ ಐಜಿಪಿ ವಿಜಯ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಓರ್ವ ಅಲ್ಟ್ರಾ ಉಗ್ರನನ್ನು ಆದಿಲ್ ವನಿ ಎಂದು ಗುರುತಿಸಲಾಗಿದ್ದು ಈತ ಕಳೆದ ಶನಿವಾರ ನಡೆದ ಬಡಗಿಯ ಹತ್ಯೆಗೆ ಕಾರಣನಾಗಿದ್ದ ಎಂದು ಹೇಳಿದ್ದಾರೆ. 

ಎನ್ ಕೌಂಟರ್ ಬಗ್ಗೆ ವಿವರಣೆ ನೀಡಿರುವ ಸೇನಾ ಅಧಿಕಾರಿಗಳು, ಎನ್ ಕೌಂಟರ್ ಹಿನ್ನೆಲೆಯಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಡ್ರಗಡ್ ಹಾಗೂ ಶೋಪಿಯಾನ್ ಜಿಲ್ಲೆಗಳಲ್ಲಿ ಸೇನಾಧಿಕಾರಿಗಳು ಪ್ರಾರಂಭಿಸಿದ್ದು, ಇನ್ನೂ ಉಗ್ರರು ಇರುವ ಶಂಕೆ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.

ಶೋಧಕಾರ್ಯಾಚರಣೆಯ ವೇಳೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಎನ್ ಕೌಂಟರ್ ನಡೆಸಬೇಕಾಯಿತು ಎಂದು ಭದ್ರತಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ ಎಫ್) ನ ಇಬ್ಬರು ಅಲ್ಟ್ರಾಗಳು, ಎನ್ ಕೌಂಟರ್ ನಲ್ಲಿ ಹತ್ಯೆಗೀಡಾಗಿದ್ದರೆ, ಮೂವರು ಭದ್ರತಾ ಸಿಬ್ಬಂದಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT