ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಸೇನಾಪಡೆ ಎನ್'ಕೌಂಟರ್: ಇಬ್ಬರು ಉಗ್ರರು ಹತ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದ ಎಂದು ಬುಧವಾರ ತಿಳಿದುಬಂದಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದ ಎಂದು ಬುಧವಾರ ತಿಳಿದುಬಂದಿದೆ. 

ಶೋಪಿಯಾನ್ ಜಿಲ್ಲೆಯ ಡ್ರಾಗಡ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿಗಳು ಲಭ್ಯವಾಗುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. 

ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಸ್ಥಳವನ್ನು ಸುತ್ತುವರೆದ ಸೇನಾಪಡೆ ಎನ್ಕೌಂಟರ್ ನಡೆಸಿದೆ. ಈ ವೇಳೆ ಇಬ್ಬರು ಉಗ್ರರು ಹತರಾಗಿದ್ದಾರೆಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಹತ್ಯೆಯಾದ ಉಗ್ರರ ಗುರುತು ಪತ್ತೆ ಹಚ್ಚುವ ಕಾರ್ಯ ಆರಂಬವಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!