ಸಂಗ್ರಹ ಚಿತ್ರ 
ದೇಶ

ಕೋವಿಡ್-19: ಭಾರತದಲ್ಲಿಂದು 14,623 ಹೊಸ ಕೇಸ್ ಪತ್ತೆ, 197 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 14,623 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 197 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 14,623 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 197 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಬುಧವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,41,08,996ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,52,651ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,78,098ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 19,446 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,34,78,247ಕ್ಕೆ ತಲುಪಿದೆ. 

ಇನ್ನು ಭಾರತದಲ್ಲಿ ಒಂದೇ 13,23,702 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 59,44,29,890 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 99,12,82,283 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ಕಾಕ್ರೋಚ್ ಜನತಾ ಪಾರ್ಟಿ, ಕಾಂಗ್ರೆಸ್ ಎರಡೂ ಒಂದೇ; ಇಲ್ಲಿ ನಿಮ್ಮನ್ನೂ ಯಾರೂ ಬಂಧಿಸಲ್ಲ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ!

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; ಎರಡು ದಿನಗಳ ಡೆಡ್‌ಲೈನ್‌!

Indian Stock Market: ಕೊನೆಗೂ ಪುಟಿದಿದ್ದ ಭಾರತೀಯ ಷೇರು ಮಾರುಕಟ್ಟೆ, ಸೆನ್ಸೆಕ್ಸ್ ದಾಖಲೆಯ ಏರಿಕೆ

T20 ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡದ ಅಪರೂಪದ ವಿಶ್ವ ದಾಖಲೆ ಬರೆದ ಪಾಕ್ ಕ್ಯಾಪ್ಟನ್!