ಸೋನು ಸೂದ್ 
ದೇಶ

ಮಗುವಿನ ಶಸ್ತ್ರ ಚಿಕಿತ್ಸೆಗೆ ಸಹಾಯ: ಮತ್ತೊಮ್ಮೆ 'ಆಪದ್ಬಾಂಧವ'ನಾದ ರಿಯಲ್​​ ಹಿರೋ ಸೋನು ಸೂದ್

ಬಾಲಿವುಡ್ ನಟ ಸೋನು ಸೂದ್​​ ಮಗುವಿನ ಶಸ್ತ್ರಚಿಕಿತ್ಸೆಯನ್ನು ಮಾಡಿಸುವ ಮೂಲಕ ಮತ್ತೊಮ್ಮೆ ತಮ್ಮ ಉದಾರತೆಯನ್ನು ತೋರಿಸಿದ್ದಾರೆ.

ಹೈದರಾಬಾದ್​​: ಬಾಲಿವುಡ್ ನಟ ಸೋನು ಸೂದ್​​ ಮಗುವಿನ ಶಸ್ತ್ರಚಿಕಿತ್ಸೆಯನ್ನು ಮಾಡಿಸುವ ಮೂಲಕ ಮತ್ತೊಮ್ಮೆ ತಮ್ಮ ಉದಾರತೆಯನ್ನು ತೋರಿಸಿದ್ದಾರೆ.

ತೆಲಂಗಾಣದ ಖಮ್ಮಮ್ ಜಿಲ್ಲೆಯ ದಂಪತಿಯ ಗಂಡು ಮಗುವನ್ನು ಉಳಿಸಲು ಸಹಾಯ ಮಾಡಿದ್ದಾರೆ. ಕೃಷ್ಣ ಮತ್ತು ಬಿಂದು ಪ್ರಿಯಾ ದಂಪತಿಗೆ ಗಂಡು ಮಗು ಜನಿಸಿದೆ. ದುಃಖಕರವಾದ ವಿಷಯವೆಂದರೆ ನವಜಾತ ಶಿಶುವಿನಲ್ಲಿ ಹೃದಯದ ಸಮಸ್ಯೆ ಕಂಡುಬಂದಿದೆ. ಮಗುವಿನ ತಂದೆ ಖಾಸಗಿ ಉದ್ಯೋಗಿಯಾಗಿದ್ದರಿಂದ, ಅವರಿಗೆ ಅಗತ್ಯವಾದ ಹಣವನ್ನು ವ್ಯವಸ್ಥೆ ಮಾಡಲು ಸಾಧ್ಯವಾಗಿರಲಿಲ್ಲ.

ವೈದ್ಯಕೀಯ ಚಿಕಿತ್ಸೆಯ ವೆಚ್ಚವು 6 ಲಕ್ಷಕ್ಕಿಂತ ಹೆಚ್ಚು ಎಂದು ವೈದ್ಯರು ಹೇಳಿದ್ದರು. ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಜನ ವಿಜ್ಞಾನ ವೇದಿಕೆಯ ಪ್ರತಿನಿಧಿಗಳು ಈ ಬಗ್ಗೆ ಸಾಮಾಜಿಕ ಮಾಧ್ಯಮದ ಮೂಲಕ ತಿಳಿದುಕೊಂಡು ಸೋನು ಸೂದ್ ಅವರನ್ನು ಸಂಪರ್ಕಿಸಿದರು.

ಕೂಡಲೇ ಪ್ರತಿಕ್ರಿಯಿಸಿದ ಸೋನು ಸೂದ್, ಅವರನ್ನು ಮುಂಬೈಗೆ ಕರೆತಂದು ಅಲ್ಲಿನ ವಾಡಿಯಾ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ವ್ಯವಸ್ಥೆ ಮಾಡಿದರು. ಬಳಿಕ ಶಸ್ತ್ರಚಿಕಿತ್ಸೆ ಕೂಡ ಯಶಸ್ವಿಯಾಗಿದೆ. ಮಗುವಿನ ಆರೋಗ್ಯವು ಈಗ ಉತ್ತಮ ಸ್ಥಿತಿಯಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸರಿಯಾದ ಸಮಯದಲ್ಲಿ ತಮಗೆ ಸಹಾಯ ಮಾಡಿದ್ದಕ್ಕಾಗಿ ಕೃಷ್ಣ ದಂಪತಿಗಳು ಸೋನು ಸೂದ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋನು ಸೂದ್ ಅವರ ಇಂತಹ ಉದಾರವಾದ ಕೆಲಸಗಳಿಂದ ಅವರನ್ನು ಜನ ನಿಜ ಜೀವನದ ಹೀರೋ ಎಂದು ಕರೆಯುತ್ತಿದ್ದರು. ಅದನ್ನು ಅವರು ಮತ್ತೊಮ್ಮೆ ತಾವು ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT