ಸಾವನ್ನಪ್ಪಿದ್ದ ಮಗು ಹಾಗೂ ಶಿಕ್ಷಕನ ಚಿತ್ರ 
ದೇಶ

ಹೋಮ್ ವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ: ಕ್ಷಣದಲ್ಲೇ ಬಾಲಕ ಸಾವು!

ಹೋಮ್​ವರ್ಕ್​ ಮಾಡದಿದ್ದಕ್ಕೆ ಶಿಕ್ಷಕನಿಂದ ಹಲ್ಲೆಗೊಳಗಾದ ಏಳನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಚುರು ಜಿಲ್ಲೆಯ ಸಲಸರ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲಾಸಾರ್ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ಚುರು: ಹೋಮ್​ವರ್ಕ್​ ಮಾಡದಿದ್ದಕ್ಕೆ ಶಿಕ್ಷಕನಿಂದ ಹಲ್ಲೆಗೊಳಗಾದ ಏಳನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಚುರು ಜಿಲ್ಲೆಯ ಸಲಸರ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲಾಸಾರ್ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ಹೋಮ್​​ವರ್ಕ್​ ಮಾಡಿಲ್ಲ ಎಂದು ಶಿಕ್ಷಕ ಮಗುವನ್ನು ನೆಲಕ್ಕೆ ಹಾಕಿ ಒದ್ದು, ಮುಷ್ಟಿಕಟ್ಟಿ ಹೊಡೆದಿದ್ದಾನೆ. ತುಂಬಾ ಹೊಡೆದ ನಂತರ ಬಾಲಕನ ಮೂಗಿನಿಂದ ರಕ್ತ ಬರಲಾರಂಭಿಸಿದೆ. ಬಳಿಕ ಆತ ಮೂರ್ಛೆ ಹೋಗಿದ್ದಾನೆ. ಮಗುವಿಗೆ ಪ್ರಜ್ಞೆ ಮರಳದಿದ್ದಾಗ, ಆರೋಪಿತ ಶಿಕ್ಷಕ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಅಲ್ಲಿ ವೈದ್ಯರು ವಿದ್ಯಾರ್ಥಿ  ಮೃತಪಟ್ಟಿದ್ದಾನೆ ಎಂದು ಹೇಳಿದ್ದಾರೆ. 

ಕೋಲಾಸಾರ್ ಗ್ರಾಮದ ನಿವಾಸಿ 13 ವರ್ಷದ ಗಣೇಶ್ ಖಾಸಗಿ ಶಾಲೆಯಲ್ಲಿ ಓದಿದ್ದಾನೆ. ಬುಧವಾರ ಬೆಳಗ್ಗೆ ಮಗು ಶಾಲೆಗೆ ಹೋಗಿತ್ತು. ಹೋಮ್​ವರ್ಕ್ ಮಾಡದ ಕಾರಣ ಶಿಕ್ಷಕ ಮನೋಜ್ ತುಂಬಾ ಹೊಡೆದಿದ್ದಾರೆ. ಈ ಕಾರಣದಿಂದ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ತಂದೆಯ ವರದಿಯ ಮೇರೆಗೆ ಶಿಕ್ಷಕನ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಸಲಸಾರ್ ಎಸ್ ಎಚ್ ಒ ಸಂದೀಪ್ ವಿಷ್ಣೋಯ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT