ಶ್ರೀನಗರ- ಶಾರ್ಜಾ ವಿಮಾನ ಉದ್ಘಾಟನೆ ಮಾಡುತ್ತಿರುವ ಅಮಿತ್ ಶಾ 
ದೇಶ

ಜಮ್ಮು ಕಾಶ್ಮೀರ: ಮೊದಲು ಗಡಿ ನಿರ್ಣಯ, ನಂತರ ರಾಜ್ಯ ಸ್ಥಾನಮಾನ: ಅಮಿತ್ ಶಾ

370ನೇ ವಿಧಿ ತೆಗೆದುಹಾಕಿದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ಅಮಿತ್ ಶಾ ಮೂರು ದಿನಗಳ ಕಾಲ ಅಲ್ಲಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಶ್ರೀನಗರ: ಶನಿವಾರ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ ಕಾಶ್ಮೀರ ರಾಜ್ಯ ಸ್ಥಾನಮಾನವನ್ನು ಗಡಿ ನಿರ್ಣಯ(ಡಿಲಿಮಿಟೇಷನ್) ಹಾಗೂ ವಿಧಾನಸಭಾ ಚುನಾವಣೆ ಬಳಿಕ ಪುನರ್ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

370ನೇ ವಿಧಿ ತೆಗೆದುಹಾಕಿದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ಅಮಿತ್ ಶಾ ಮೂರು ದಿನಗಳ ಕಾಲ ಅಲ್ಲಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಶನಿವಾರ ಅವರು ಶ್ರೀನಗರದ ಯುವ ಸಂಘಸಂಸ್ಥೆಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಗಡಿ ನಿರ್ಣಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಗಡಿ ನಿರ್ಣಯ ಆಗಿಯೇ ತೀರುತ್ತದೆ. ಆದರೆ ಚುನಾವಣೆ ಬಳಿಕ. ಆಗಲೇ ಕಾಶ್ಮೀರದ ರಾಜ್ಯ ಸ್ಥಾನಮಾನವನ್ನೂ ಪುನರ್ ಸ್ಥಾಪಿಸಲಾಗುವುದು. ಇದರಿಂದಾಗಿ ರಾಜ್ಯದ ಯುವ ಪೀಳಿಗೆಗೆ ಉದ್ಯೋಗಾವಕಾಶಗಳು ಹೆಚ್ಚಲಿದೆ. ಎಂದು ಶಾ ಅಭಿಪ್ರಾಯಪಟ್ಟಿದ್ದಾರೆ. 

ತಮ್ಮ ಭಾಷಣದ ನಡುವೆ ಅಮಿತ್ ಶಾ ಜಮ್ಮು ಕಾಶ್ಮೀರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಯಾರಿಂದಲೂ ತಡೆಗಟ್ಟಲು ಸಾಧ್ಯವಿಲ್ಲ.ರಾಜ್ಯದಲ್ಲಿ ಶಾಂತಿ ಕದಡಲು ಯಾರಾದರೂ ಯತ್ನಿಸಿದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸುವ ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT