ಅಮಿತ್ ಶಾ 
ದೇಶ

ಕಣಿವೆ ಪ್ರದೇಶದಲ್ಲಿ ಭದ್ರತೆ ಪರಾಮರ್ಶೆ: ಜಮ್ಮು-ಕಾಶ್ಮೀರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿನಿಂದ ಮೂರು ದಿನ ಪ್ರವಾಸ

ಕಣಿವೆ ಪ್ರದೇಶದ ಭದ್ರತಾ ಪರಿಸ್ಥಿತಿಯನ್ನು ಪರಾಮರ್ಶಿಸಲು ಮೂರು ದಿನಗಳ ಪ್ರವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಜಮ್ಮು-ಕಾಶ್ಮೀರದ ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದಾರೆ.

ಶ್ರೀನಗರ: ಕಣಿವೆ ಪ್ರದೇಶದ ಭದ್ರತಾ ಪರಿಸ್ಥಿತಿಯನ್ನು ಪರಾಮರ್ಶಿಸಲು ಮೂರು ದಿನಗಳ ಪ್ರವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಜಮ್ಮು-ಕಾಶ್ಮೀರದ ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಉಗ್ರರಿಂದ ಇತ್ತೀಚೆಗೆ ನಾಗರಿಕರ ಹತ್ಯೆ ಮತ್ತು ಹೆಚ್ಚಿನ ಉಪಟಳ, ಕಣಿವೆ ಪ್ರದೇಶದಲ್ಲಿ ಬೆಳವಣಿಗೆಗಳ ಬಗ್ಗೆ ಪರಾಮರ್ಶೆ ನಡೆಸಲು ಈ ಭೇಟಿ ಕೈಗೊಳ್ಳುತ್ತಿದ್ದಾರೆ.

2019ರ ಆಗಸ್ಟ್ 5ರಂದು ಪೂರ್ವ ವಲಯ ರಾಜ್ಯಗಳನ್ನು ವಿಭಜನೆ ಮಾಡಿ ಸಂವಿಧಾನ ವಿಧಿ 370 ಮತ್ತು 35ಎ ತೆಗೆದುಹಾಕಿದ ನಂತರ ಅಮಿತ್ ಶಾ ಅವರ ಮೊದಲ ಜಮ್ಮು-ಕಾಶ್ಮೀರ ಭೇಟಿಯಾಗಿದ್ದು ತೀವ್ರ ಕುತೂಹಲ ಕೆರಳಿದೆ. 

ಕೇಂದ್ರ ಗೃಹ ಸಚಿವರ ಭೇಟಿ ಸಂದರ್ಭದಲ್ಲಿ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಭದ್ರತೆ ವಿಚಾರವಾಗಿ ತಾತ್ಕಾಲಿಕ ಚೆಕ್ ಪಾಯಿಂಟ್ ಗಳನ್ನು ಮತ್ತು ಹೊಸ ಬಂಕರ್ ಗಳನ್ನು ಶ್ರೀನಗರ ಮತ್ತು ಕಣಿವೆ ಪ್ರದೇಶದ ಬೇರೆ ಕಡೆಗಳಲ್ಲಿ ರಚಿಸಲಾಗಿದೆ. 1990ರ ದಶಕದಲ್ಲಿ ಇಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾದ ಮೇಲೆ ಮಹಿಳಾ ಸಿಆರ್ ಪಿಎಫ್ ಸಿಬ್ಬಂದಿಯನ್ನು ಲಾಲ್ ಚೌಕ್ ನ ನಗರ ಕೇಂದ್ರದಲ್ಲಿ ನಿಯೋಜಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಕೆಲವು ಭಾಗಗಳಲ್ಲಿ ಇಂಟರ್ನೆಟ್ ಸಂಪರ್ಕವನ್ನು ತೆಗೆದುಹಾಕಲಾಗಿದೆ. 
ದಾಲ್ ಸರೋವರದ ತೀರದ ಬೌಲೆವರ್ಡ್ ರಸ್ತೆಯನ್ನು ಸಾರ್ವಜನಿಕ ಓಡಾಟಕ್ಕೆ ಇಂದಿನಿಂದ ನಾಡಿದ್ದು 25ರವರೆಗೆ ನಿಷೇಧಿಸಲಾಗಿದೆ. ಬದಲಿ ಮಾರ್ಗಗಗಳನ್ನು ಬಳಸಲು ಜನರಿಗೆ ಸೂಚಿಸಲಾಗಿದೆ. 

ಕಾಶ್ಮೀರ ಕಣಿವೆಯಲ್ಲಿ ಇತ್ತೀಚೆಗೆ ವಲಸೆ ಕಾರ್ಮಿಕರು ಮತ್ತು ಅಲ್ಪಸಂಖ್ಯಾತ ಸಮುದಾಯದ ಸದಸ್ಯರನ್ನು ಗುರಿಯಾಗಿಸಿಕೊಂಡು ಹತ್ಯೆಯಾದ ಹಿನ್ನೆಲೆಯಲ್ಲಿ ಅಮಿತ್ ಶಾ ಈ  ಭೇಟಿ ನೀಡುತ್ತಿದ್ದಾರೆ. ಐವರು ವಲಸೆ ಕಾರ್ಮಿಕರು, ಮೂವರು ಅಲ್ಪಸಂಖ್ಯಾತ ಸಮುದಾಯದವರು ಮತ್ತು ನಾಲ್ವರು ಸ್ಥಳೀಯರು ಸೇರಿದಂತೆ ಕನಿಷ್ಠ 12 ನಾಗರಿಕರು ಈ ತಿಂಗಳು ಭಯೋತ್ಪಾದಕರ ಗುಂಡಿಗೆ ಬಲಿಯಾಗಿದ್ದಾರೆ. ಅಮಿತ್ ಶಾ ಅವರು ಉನ್ನತ ನಾಗರಿಕ ಮತ್ತು ಭದ್ರತಾ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉನ್ನತ ಗೃಹ ಇಲಾಖೆಯ ಅಧಿಕಾರಿಗಳು ಶಾ ಅವರ ಜೊತೆ ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT