ಸಂಗ್ರಹ ಚಿತ್ರ 
ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 106.79 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 106.79 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಹೇಳಿದೆ.

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 106.79 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಹೇಳಿದೆ.

ಈವರೆಗೆ ಕೇಂದ್ರವು ರಾಜ್ಯಗಳಿಗೆ 106.79 (1,06,79,93,365) ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 12,02,30,859 ಲಸಿಕೆಗಳಿವೆ ಎಂದು ಹೇಳಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ  1,02,10,43,258 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆಗ ಸಿದ್ಧಾರ್ಥ್, ಈಗ CJ Roy': 'ತೆರಿಗೆ ಭಯೋತ್ಪಾದನೆ'; ಐಟಿ ದಾಳಿ ಕುರಿತು ಕೇಂದ್ರಕ್ಕೆ ಉದ್ಯಮಿ Mohandas Pai ಪತ್ರ! Video

T20 World Cup 2026: 'ಟೂರ್ನಿ ಆಡ್ತೇವೆ.. ಆದ್ರೆ ಭಾರತದ ವಿರುದ್ಧ ಆಡಲ್ಲ'.. ಫೆ.15ರ ಪಂದ್ಯ ನಿಷೇಧ, ಐಸಿಸಿಗೆ PCB ಹೊಸ ತಲೆನೋವು!

U19 World Cup: ಪಾಕಿಸ್ತಾನವನ್ನು ಬಗ್ಗು ಬಡಿದು ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಭಾರತ, ಸೆಮಿಸ್‌ನಲ್ಲಿ ಅಫ್ಘಾನ್ ಜೊತೆ ಗುದ್ದಾಟ!

ಇನ್ಮುಂದೆ ಷೇರು ಮರುಖರೀದಿ ಲಾಭಕ್ಕೂ ತೆರಿಗೆ! capital gain tax ಎಂದು ಪರಿಗಣಿಸುವ ಘೋಷಣೆ

ಕೇಂದ್ರ ಬಜೆಟ್ 2026: ಷೇರುಮಾರುಕಟ್ಟೆ 'ರಕ್ತಪಾತ', ಹೂಡಿಕೆದಾರರ 9.40 ಲಕ್ಷ ಕೋಟಿ ರೂ ನಷ್ಟ! ಕುಸಿತಕ್ಕೆ ಕಾರಣವೇನು?

SCROLL FOR NEXT