ಸಂಜಯ್ ರಾವತ್ 
ದೇಶ

100 ಕೋಟಿ ಡೋಸ್ ಲಸಿಕೆ ನೀಡಿಕೆಯೇ ಸುಳ್ಳು.. ಲೆಕ್ಕ ಹಾಕಿದ್ದು ಯಾರು?: ಸಂಜಯ್ ರಾವತ್ ಪ್ರಶ್ನೆ

ದೇಶದಲ್ಲಿ ಕೋವಿಡ್ -19 ವಿರುದ್ಧ 100 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ ಎಂಬ ಮೋದಿ ಸರ್ಕಾರದ ಹೇಳಿಕೆಯೇ ಸುಳ್ಳು ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ.

ಮುಂಬೈ: ದೇಶದಲ್ಲಿ ಕೋವಿಡ್ -19 ವಿರುದ್ಧ 100 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ ಎಂಬ ಮೋದಿ ಸರ್ಕಾರದ ಹೇಳಿಕೆಯೇ ಸುಳ್ಳು ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ.

ಮಹಾರಾಷ್ಟ್ರದ ನಾಸಿಕ್‌ನಲ್ಲಿ ಶನಿವಾರ ನಡೆದ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾವತ್, 100 ಕೋಟಿ ಡೋಸ್ ವ್ಯಾಕ್ಸಿನೇಷನ್ ನೀಡಲಾಗಿದೆ ಎಂಬುದೇ ಸುಳ್ಳು. ಇದಕ್ಕೆ ತಾವು ಪುರಾವೆ ನೀಡುವುದಾಗಿ ಹೇಳಿದರು.

ಈ ವರೆಗೂ ದೇಶದಲ್ಲಿ ಕೇವಲ 23 ಕೋಟಿ ಜನರಿಗೆ ಮಾತ್ರ ಲಸಿಕೆ ಆಗಿದೆ ಎಂಬ ಮಾಹಿತಿ ಇದೆ. ನರೇಂದ್ರ ಮೋದಿ ಅವರು ಹೇಳುತ್ತಿರುವ ಅಂಕಿ ಅಂಶಗಳು ನಿಜವಾಗಿದ್ದರೆ ಈ ಸಂಭ್ರಮಾಚರಣೆಯಲ್ಲಿ ನಾವು ಭಾಗಿಯಾಗುತ್ತೇವೆ. ಆದರೆ ನನಗೆ 100 ಕೋಟಿ ಲಸಿಕೆ ವಿತರಣೆ ಬಗ್ಗೆ ಸಂಶಯವಿದೆ. ದೇಶದಲ್ಲಿ ಕೇವಲ 33 ಕೋಟಿ ಜನರಿಗೆ ಮಾತ್ರ ಲಸಿಕೆ ಆಗಿದೆ ಎಂಬ ಮಾಹಿತಿ ಇದೆ ಎಂದು ಹೇಳಿದ್ದಾರೆ.

ಕಳೆದ ಹದಿನೈದು ದಿನಗಳಲ್ಲಿ, 20 ಹಿಂದೂಗಳು ಮತ್ತು ಸಿಖ್ಖರನ್ನು ಕೊಲ್ಲಲಾಗಿದೆ, 17 ರಿಂದ 18 ಸೈನಿಕರು ಹುತಾತ್ಮರಾಗಿದ್ದಾರೆ, ಅರುಣಾಚಲ ಪ್ರದೇಶ ಮತ್ತು ಲಡಾಖ್‌ನಲ್ಲಿ ಚೀನಾ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ, ಆದರೆ ನಾವು 100 ಕೋಟಿ ವ್ಯಾಕ್ಸಿನೇಷನ್ ಆಚರಿಸುತ್ತಿದ್ದೇವೆ, ಇದು ನಿಜವಲ್ಲ ಎಂದು ಶಿವಸೇನೆ ಮುಖ್ಯಸ್ಥರು ಹೇಳಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT