ದೇಶ

ಉತ್ತರ ಪ್ರದೇಶದ ಕಾನ್ಫುರದಲ್ಲಿ ಮೊದಲ ಜಿಕಾ ವೈರಸ್ ಪ್ರಕರಣ ಪತ್ತೆ! 

Nagaraja AB

ಕಾನ್ಫುರ: ಉತ್ತರ ಪ್ರದೇಶದ ಕಾನ್ಫುರದಲ್ಲಿ ಮೊದಲ ಜಿಕಾ ವೈರಸ್ ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯಾಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಭಾರತೀಯ ವಾಯುಪಡೆಯ ವಾರೆಂಟ್ ಅಧಿಕಾರಿಯೊಬ್ಬರಿಗೆ ಸೋಂಕು ಇರುವುದು ಶನಿವಾರ ಪತ್ತೆಯಾಗಿದೆ. ಇದು ಕಾನ್ಫುರದಲ್ಲಿ ಮೊದಲ ಪ್ರಕರಣವಾಗಿದೆ ಎಂದು ಅವರು ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ಜ್ವರದಿಂದ ನರಳುತ್ತಿದ್ದ ಐಎಎಫ್ ಅಧಿಕಾರಿ, ಜಿಲ್ಲೆಯ  ವಾಯುಪಡೆ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ಮುಖ್ಯ ಆರೋಗ್ಯಾಧಿಕಾರಿ ನೇಪಾಲ್ ಸಿಂಗ್ ಮಾಹಿತಿ ನೀಡಿದ್ದಾರೆ. ಸೋಂಕಿನ ಲಕ್ಷಣಗಳು ಕಂಡುಬಂದ ನಂತರ ರಕ್ತದ ಮಾದರಿ ಸಂಗ್ರಹಿಸಿ, ಸೂಕ್ತ ಪರೀಕ್ಷೆಗಾಗಿ ಪುಣೆಗೆ ಕಳುಹಿಸಲಾಗಿತ್ತು. ಅಲ್ಲಿ ಜಿಕಾ ವೈರಸ್ ತಗುಲಿರುವುದು ಪತ್ತೆಯಾಗಿದೆ. ಶನಿವಾರ ಈ ಬಗ್ಗೆ ವರದಿ ಬಂದಿರುವುದಾಗಿ ಅವರು ಹೇಳಿದ್ದಾರೆ. 
 
ಈ ಸೋಂಕಿತರ ಸಂಪರ್ಕಕ್ಕೆ ಬಂದಿದ್ದ 22 ಜನರ ಮಾದರಿಗಳನ್ನು  ಕೂಡಾ ಪರೀಕ್ಷೆಗೆ ಕಳುಹಿಸಲಾಗಿದೆ. ಪರಿಸ್ಥಿತಿ ಮೇಲೆ ನಿಗಾ ವಹಿಸುವಂತೆ ಆರೋಗ್ಯ ಮತ್ತು ಸ್ಥಳೀಯ ಸಂಸ್ಥೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೇ, ಜಿಲ್ಲೆಯಲ್ಲಿ ಸೋಂಕು ಹರಡದಂತೆ ಅನೇಕ ತಂಡಗಳು ಕಾರ್ಯ ಪ್ರವೃತ್ತರಾಗಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.

SCROLL FOR NEXT