ಸಂಗ್ರಹ ಚಿತ್ರ 
ದೇಶ

ಕೋವಿಡ್-19: ಭಾರತದಲ್ಲಿಂದು 14,306 ಹೊಸ ಕೇಸ್ ಪತ್ತೆ, 443 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 14,306 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 443 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 14,306 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 443 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,41,89,774ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,54,712ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,67,695ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 18,762 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,35,67,367ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 9,98,397 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 60,07,69,717 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,02,27,12,895 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ