ಭಾರತ-ಪಾಕ್ ಪಂದ್ಯ: ಉತ್ತರ ಪ್ರದೇಶ, ಜಮ್ಮು-ಕಾಶ್ಮೀರ, ಬಿಹಾರದ ವಿದ್ಯಾರ್ಥಿಗಳ ನಡುವೆ ಘರ್ಷಣೆ
ಭಾರತ-ಪಾಕ್ ನಡುವಿನ ಟಿ20 ವಿಶ್ವಕಪ್ ಪಂದ್ಯದ ಬಳಿಕ ಜಮ್ಮು-ಕಾಶ್ಮೀರದ ವಿದ್ಯಾರ್ಥಿಗಳು ಉತ್ತರ ಪ್ರದೇಶ, ಬಿಹಾರ ವಿದ್ಯಾರ್ಥಿಗಳೊಂದಿಗೆ ವಾಗ್ವಾದಕ್ಕೆ ಇಳಿದಿದ್ದು ಘರ್ಷಣೆ ಉಂಟಾಗಿರುವ ಘಟನೆ ಪಂಜಾಬ್ ನಲ್ಲಿ ನಡೆದಿದೆ.
ಪಂಜಾಬ್: ಭಾರತ-ಪಾಕ್ ನಡುವಿನ ಟಿ20 ವಿಶ್ವಕಪ್ ಪಂದ್ಯದ ಬಳಿಕ ಜಮ್ಮು-ಕಾಶ್ಮೀರದ ವಿದ್ಯಾರ್ಥಿಗಳು ಉತ್ತರ ಪ್ರದೇಶ, ಬಿಹಾರ ವಿದ್ಯಾರ್ಥಿಗಳೊಂದಿಗೆ ವಾಗ್ವಾದಕ್ಕೆ ಇಳಿದಿದ್ದು ಘರ್ಷಣೆ ಉಂಟಾಗಿರುವ ಘಟನೆ ಪಂಜಾಬ್ ನ ಸಂಗ್ರೂರ್ ಜಿಲ್ಲೆಯಲ್ಲಿನ ಇಂಜಿನಿಯರಿಂಗ್ ಇನ್ಸ್ಟಿಟ್ಯೂಟ್ ನಲ್ಲಿ ನಡೆದಿದೆ.
ಪಂದ್ಯದ ಬಳಿಕ ಕೇಳಿಬಂದ ಕೆಲವು ಘೋಷಣೆಗಳ ಪರಿಣಾಮ ಈ ಘರ್ಷಣೆ ಉಂಟಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭಾಯ್ ಗುರುದಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾಶ್ಮೀರ, ಉತ್ತರ ಪ್ರದೇಶ, ಬಿಹಾರದ ವಿದ್ಯಾರ್ಥಿಗಳು ಪಂದ್ಯವನ್ನು ಅವರ ಕೊಠಡಿಗಳಲ್ಲಿ ವೀಕ್ಷಿಸುತ್ತಿದ್ದರು. ಈ ವೇಳೆ ಪಾಕಿಸ್ತಾನ ಪಂದ್ಯ ಗೆದ್ದಾಗ
ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ. ಕಾಶ್ಮೀರಿ ವಿದ್ಯಾರ್ಥಿಗಳು ತಮ್ಮ ಕೊಠಡಿಗೆ ಉತ್ತರ ಪ್ರದೇಶದ ಕೆಲವು ವಿದ್ಯಾರ್ಥಿಗಳು ನುಗ್ಗಿದ್ದರು ಎಂದು ಆರೋಪಿಸಿರುವ ವಿಡಿಯೋ ವೈರಲ್ ಆಗತೊಡಗಿದೆ.
"ನಾವು ಪಂದ್ಯ ವೀಕ್ಷಿಸುತ್ತಿದ್ದೆವು. ಈ ವೇಳೆ ಉತ್ತರ ಪ್ರದೇಶ ವಿದ್ಯಾರ್ಥಿಗಳು ನಮ್ಮ ಕೊಠಡಿಗೆ ನುಗ್ಗಿದ್ದರು" ಎಂದು ಕಾಶ್ಮೀರದ ವಿದ್ಯಾರ್ಥಿಗಳು ಆರೋಪಿಸಿದ್ದು ತಮ್ಮ ಕೊಠಡಿಯಲ್ಲಿ ಉಂಟಾಗಿರುವ ಹಾನಿಯನ್ನು ತೋರಿಸಿದ್ದಾರೆ. ಈ ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.