ಬಾಬುಲ್ ಸುಪ್ರಿಯೋ 
ದೇಶ

ಗೋವಾ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಉತ್ತಮ ಪ್ರದರ್ಶನ: ಬಾಬುಲ್ ಸುಪ್ರಿಯೋ ವಿಶ್ವಾಸ

ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲ ತೃಣಮೂಲ ಕಾಂಗ್ರೆಸ್ ಉತ್ತಮ ಪ್ರದರ್ಶನ ತೋರಲಿದೆ ಎಂದು ಆ ಪಕ್ಷದ ಮುಖಂಡ ಬಾಬುಲ್ ಸುಪ್ರಿಯೋ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಣಜಿ: ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲ ತೃಣಮೂಲ ಕಾಂಗ್ರೆಸ್ ಉತ್ತಮ ಪ್ರದರ್ಶನ ತೋರಲಿದೆ ಎಂದು ಆ ಪಕ್ಷದ ಮುಖಂಡ ಬಾಬುಲ್ ಸುಪ್ರಿಯೋ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಕ್ಟೋಬರ್ 28 ರಂದು ಗೋವಾಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಸುಪ್ರಿಯೋ, ಸಂಸದರಾದ ಮೊಯಿತ್ರಾ, ಸೌಗತಾ ರಾಯ್ ಸೇರಿದಂತೆ ಅನೇಕ ಮುಖಂಡರು ಗೋವಾಕ್ಕೆ ಆಗಮಿಸಿದ್ದಾರೆ.

ಗೋವಾ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಟಿಎಂಸಿ ಈಗಾಗಲೇ ಘೋಷಿಸಿದೆ. ಮುಂಬರುವ ವಿಧಾನಸಭಾ ಚುನಾವಣೆ ಅತ್ಯಂತ ಪ್ರಮುಖವಾಗಿದೆ. ಅದರಲ್ಲಿ ಟಿಎಂಸಿ ಉತ್ತಮ ಪ್ರದರ್ಶನ ತೋರಲಿದೆ ಎಂದು ಸುಪ್ರಿಯೋ ಸುದ್ದಿಗಾರರಿಗೆ ತಿಳಿಸಿದರು. 

ಗೋವಾದಲ್ಲಿ ಪ್ರವಾಸೋದ್ಯಮ ಸ್ನೇಹಿ ಅನೇಕ ಅಭಿವೃದ್ಧಿ ಯೋಜನೆಗಳು ಆಗಬೇಕಾಗಿದೆ. ಗೋವಾ ಸಂಸ್ಕೃತಿ, ಸಂಪ್ರದಾಯ, ಸಂಗೀತ ಮತ್ತು ಅದ್ಬುತ ಬೀಚ್ ಗಳಿಗೆ ಹೆಸರುವಾಸಿಯಾಗಿದೆ. ಇಲ್ಲಿ ಹೆಚ್ಚಿನ ಕೆಲಸ ವಾಗಬೇಕಿದೆ ಎಂದು ಹೇಳಿದರು. 40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಮುಂದಿನ ವರ್ಷದ ಫೆಬ್ರವರಿ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?