ಸಾಂದರ್ಭಿಕ ಚಿತ್ರ 
ದೇಶ

ರಹಸ್ಯ ಮಾಹಿತಿ ಸೋರಿಕೆ: ಸಿಬಿಐನಿಂದ ನೌಕಾದಳ ಅಧಿಕಾರಿ ಸೇರಿದಂತೆ ಐವರ ಬಂಧನ

ಪ್ರಕರಣ ಸಂಬಂಧ ಸಿಬಿಐ ದೆಹಲಿ, ಮುಂಬೈ, ಹೈದರಾಬಾದ್, ವಿಶಾಖಪಟ್ಟಣಂ ಸೇರಿದಂತೆ ಇದುವರೆಗೂ 19 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. 

ನವದೆಹಲಿ: ದೇಶದ ಸಬ್ ಮರೈನ್ ಪ್ರಾಜೆಕ್ಟ್ ಸಂಬಂಧಿಸಿದಂತೆ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇರೆ ಸಿಬಿಐ, ನೌಕಾದಳ ಕಮಾಂಡರ್ ಸೇರಿದಂತೆ ಒಟ್ಟು ಐವರನ್ನು ಬಂಧಿಸಿದೆ. 

ಇಬ್ಬರು ನಿವೃತ್ತ ನೌಕಾದಳ ಸಿಬ್ಬಂದಿ ಹಾಗೂ ಓರ್ವ ವ್ಯಕ್ತಿಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ. ಪ್ರಕರಣ ಸಂಬಂಧ ಸಿಬಿಐ ದೆಹಲಿ, ಮುಂಬೈ, ಹೈದರಾಬಾದ್, ವಿಶಾಖಪಟ್ಟಣಂ ಸೇರಿದಂತೆ ಇದುವರೆಗೂ 19 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. 

ಶೋಧ ಕಾರ್ಯಾಚರಣೆ ವೇಳೆ ದಾಖಲೆಪತ್ರಗಳು, ಡಿಜಿಟಲ್ ಸಾಕ್ಷ್ಯಗಳು ಸಿಬಿಐ ಅಧಿಕಾರಿಗಳಿಗೆ ಲಭ್ಯವಾಗಿದೆ ಎನ್ನಲಾಗಿದೆ. ಸಿಬಿಐ ತನಿಖೆಗೆ ಎಲ್ಲಾ ರೀತಿಯ ಸಹಾಯ ಮಾಡುವುದಾಗಿ ನೌಕಾದಲ ತಿಳಿಸಿದೆ. ಅಲ್ಲದೆ ಆಂತರಿಕ ತನಿಖಾ ಸಮಿತಿಯನ್ನು ರಚನೆ ಮಾಡಲಾಗಿದ್ದು ರಕ್ಷಣಾ ಮಾಹಿತಿ ಸೋರಿಕೆಯಾದುದರ ಕುರಿತು ಪರಿಶೀಲನೆ ನಡೆಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್