ಬೆಂಕಿ ಸ್ಫೋಟದ ನಂತರ ಸ್ಥಳದಲ್ಲಿನ ದೃಶ್ಯ 
ದೇಶ

ತಮಿಳು ನಾಡು: ಪಟಾಕಿ ಅಂಗಡಿಯಲ್ಲಿ ಬೆಂಕಿ ಸ್ಫೋಟ; ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ, 10 ಮಂದಿಗೆ ಗಾಯ

ದೀಪಾವಳಿ ಹೊತ್ತಿನಲ್ಲಿ ತಮಿಳು ನಾಡಿನ ಕಲ್ಲಕುರಿಚಿ ಜಿಲ್ಲೆಯ ಶಂಕರಾಪುರಂ ಎಂಬಲ್ಲಿ ಕಳೆದ ರಾತ್ರಿ ಅನಾಹುತ ಸಂಭವಿಸಿದೆ. ಪಟಾಕಿಗಳನ್ನು ಮಾರಾಟ ಮಾಡುವ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಮೃತಪಟ್ಟವರ ಸಂಖ್ಯೆ 6ಕ್ಕೇರಿದ್ದು, 10 ಮಂದಿ ಗಾಯಗೊಂಡಿದ್ದಾರೆ.

ವಿಲ್ಲುಪುರಂ: ದೀಪಾವಳಿ ಹೊತ್ತಿನಲ್ಲಿ ತಮಿಳು ನಾಡಿನ ಕಲ್ಲಕುರಿಚಿ ಜಿಲ್ಲೆಯ ಶಂಕರಾಪುರಂ ಎಂಬಲ್ಲಿ ಕಳೆದ ರಾತ್ರಿ ಅನಾಹುತ ಸಂಭವಿಸಿದೆ. ಪಟಾಕಿಗಳನ್ನು ಮಾರಾಟ ಮಾಡುವ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಮೃತಪಟ್ಟವರ ಸಂಖ್ಯೆ 6ಕ್ಕೇರಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಅನಾಹುತ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆಯಿದೆ.

ಮೃತ ನಾಲ್ವರನ್ನು ಕಲೀದ್, ಶಾ ಅಲಮ್, ಶೇಕ್ ಬಶೀರ್ ಮತ್ತು ಅಯ್ಯಸಮಿ ಎಂದು ಗುರುತಿಸಲಾಗಿದ್ದು ಮತ್ತೊಬ್ಬರ ಗುರುತು ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡವರರನ್ನು ಕಲ್ಲಕುರಿಚಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪರಿಸ್ಥಿತಿ ಚಿಂತಾಜನಕವಾಗಿದೆ, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಕೂಡ ಪೊಲೀಸರು ತಿಳಿಸಿದ್ದಾರೆ.

ಎಲೆಕ್ಟ್ರಿಕ್ ಲೈನ್ ನಲ್ಲಿ ಬೆಂಕಿ ಹತ್ತಿಕೊಂಡು ಈ ದುರ್ಘಟನೆ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದು ಹೆಚ್ಚಿನ ವಿಚಾರಣೆ ನಡೆಯುತ್ತಿದೆ. ಕಟ್ಟಡದಲ್ಲಿ ಇನ್ನೂ ಕೆಲವರು ಸಿಲುಕಿ ಹಾಕಿಕೊಂಡಿರುವ ಶಂಕೆಯಿದೆ ಎಂದು ಪೊಲೀಸರು ಹೇಳಿದ್ದಾರೆ.

ಶಂಕರಾಪುರಂನಲ್ಲಿ ದಿನಸಿ ಅಂಗಡಿಯಲ್ಲಿ ದೀಪಾವಳಿ ಸಮಯವಾಗಿರುವುದರಿಂದ ಕೆಲ ದಿನಗಳ ಹಿಂದೆ ಪಟಾಕಿ ಅಂಗಡಿಯನ್ನು ತೆರೆಯಲಾಗಿತ್ತು. ಕಟ್ಟಡದ ಮೊದಲ ಮಹಡಿಯಲ್ಲಿ ಪಟಾಕಿಗಳನ್ನು ಸಂಗ್ರಹಿಸಿಡಲಾಗಿತ್ತು. ನಿನ್ನೆ ರಾತ್ರಿ ಪಟಾಕಿಗಳು ತುಂಬಿದ್ದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಪಟಾಕಿಗಳು ಒಂದರ ನಂತರ ಒಂದರಂತೆ ಅವ್ಯಾಹತವಾಗಿ ಸ್ಫೋಟಗೊಳ್ಳಲು ಆರಂಭಿಸಿದವು.

ಕೂಡಲೇ ಬೃಹತ್ ಪ್ರಮಾಣದಲ್ಲಿ ಇಡೀ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡಿತು. ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಕೂಡಲೇ ಸ್ಥಳಕ್ಕೆ ಬಂದಿದ್ದರಿಂದ ಅಗ್ನಿ ಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದರು. ಬೆಂಕಿಯನ್ನು ಆರಿಸಲು ಸುಮಾರು ಎರಡು ಗಂಟೆ ಹಿಡಿಯಿತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT