ಮಮತಾ ಬ್ಯಾನರ್ಜಿ - ಲಿಯಾಂಡರ್ ಪೇಸ್ 
ದೇಶ

ಮಮತಾ ಸಮ್ಮುಖದಲ್ಲಿ ಟಿಎಂಸಿ ಸೇರಿದ ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್

ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಅವರು ಶುಕ್ರವಾರ ತೃಣಮೂಲ ಕಾಂಗ್ರೆಸ್(ಟಿಎಂಸಿ) ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ದೀದಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಪಣಜಿ: ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಅವರು ಶುಕ್ರವಾರ ತೃಣಮೂಲ ಕಾಂಗ್ರೆಸ್(ಟಿಎಂಸಿ) ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ದೀದಿ ಪಕ್ಷಕ್ಕೆ ಸೇರ್ಪಡೆಗೊಂಡರು.

2022ರ ಗೋವಾ ವಿಧಾನಸಭೆ ಚುನಾವಣೆ ಹಿನ್ನೆಯಲ್ಲಿ ಮೂರು ದಿನಗಳ ಗೋವಾ ಪ್ರವಾಸದಲ್ಲಿರುವ ಮಮತಾ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಲಿಯಾಂಡರ್ ಪೇಸ್ ಅವರು ಇಂದು ಟಿಎಂಸಿಗೆ ಸೇರಿದ್ದಾರೆ. ಇದಕ್ಕೂ ಮುನ್ನ ಬಾಲಿವುಡ್​ ನಟಿ ನಫೀಸಾ ಅಲಿ ಮತ್ತು ಮೃಣಾಲಿನಿ ದೇಶಪ್ರಭು ದೀದಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್​​ನ್ನು ಸೇರ್ಪಡೆಯಾಗಿದ್ದರು.

ಟಿಎಂಸಿ ಸೇರ್ಪಡೆಯಾದ ಬಳಿಕ ಮಾತನಾಡಿದ ಲಿಯಾಂಡರ್ ಪೇಸ್​, ನಾನು ಟೆನ್ನಿಸ್​​ನಿಂದ ನಿವೃತ್ತನಾಗಿದ್ದೇನೆ. ಇನ್ನು ಮುಂದೆ ರಾಜಕೀಯ ಎಂಬ ವಾಹನವನ್ನೇರಿ ಜನ ಸೇವೆ ಮಾಡಲು ನಿರ್ಧಾರ ಮಾಡಿದ್ದೇನೆ. ಮಮತಾ ಬ್ಯಾನರ್ಜಿ ನಿಜಕ್ಕೂ ಒಬ್ಬ ಚಾಂಪಿಯನ್​ ಎಂದು ಹೇಳಿದ್ದಾರೆ.

ನಮ್ಮ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಲಿಯಾಂಡರ್ ಪೇಸ್ ಇಂದು ನಮ್ಮೊಂದಿಗೆ ಸೇರಿಕೊಂಡಿದ್ದಾರೆ ಎಂದು ಹೇಳಲು ತುಂಬಾ ಸಂತೋಷವಾಗುತ್ತಿದೆ ಎಂದು ಟಿಎಂಸಿ ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್