ದೇಶ

ರಾಜಕಾರಣದ ಬಗ್ಗೆ ಕಾಂಗ್ರೆಸ್ ಗಂಭೀರವಾಗದಿದ್ದರೇ ಮೋದಿ ಮತ್ತಷ್ಟು ಪವರ್ ಫುಲ್: ಗಾಂಧಿಗಳಿಗೆ ದೀದಿ ಎಚ್ಚರಿಕೆ!

Shilpa D

ಪಣಜಿ: ರಾಜಕೀಯದ ಬಗ್ಗೆ ಕಾಂಗ್ರೆಸ್ ಗಂಭೀರವಾಗಿ ಚಿಂತಿಸದಿದ್ದರೇ ಪ್ರಧಾನಿ ನರೇಂದ್ರ ಮೋದಿ ಮತ್ತಷ್ಟು ಶಕ್ತಿಶಾಲಿಯಾಗುತ್ತಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಸಿದ್ದಾರೆ.

ಗೋವಾಗೆ ಮೂರು ದಿನಗಳ ಭೇಟಿ ನೀಡಿರುವ ಮಮತಾ ಬ್ಯಾನರ್ಜಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ  ಕಾಂಗ್ರೆಸ್  ಪಕ್ಷವು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು  ವಾಗ್ದಾಳಿ ನಡೆಸಿದ ಅವರು ಅವರು ದೆಹಲಿಯಯಲ್ಲಿ ದಾದಾಗಿರಿ' (ಬೆದರಿಕೆ) ಸಾಕಷ್ಟು ಇದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ರಾಜಕೀಯವನ್ನು ಗಂಭೀರವಾಗಿ ಪರಿಗಣಿಸದ ಕಾರಣ ಈಗಲೇ ಎಲ್ಲವನ್ನೂ ಹೇಳಲಾಗದು. ಕಾಂಗ್ರೆಸ್‌ನಿಂದಾಗಿ ಮೋದಿ  ಹೆಚ್ಚು ಶಕ್ತಿಶಾಲಿಯಾಗಲಿದ್ದಾರೆ. ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗದಿದ್ದರೆ, ಅದಕ್ಕಾಗಿ ದೇಶ ಏಕೆ ನರಳಬೇಕು? ಎಂದು ಪ್ರಶ್ನಿಸಿದ್ದಾರೆ.  

ಈ ಹಿಂದೆ ಕಾಂಗ್ರೆಸ್ ಗೆ ಅವಕಾಶ ಸಿಕ್ಕಿತು . ಬಿಜೆಪಿ ವಿರುದ್ಧ ಹೋರಾಡುವ ಬದಲು ನನ್ನ ರಾಜ್ಯದಲ್ಲಿ ನನ್ನ ವಿರುದ್ಧ ಸ್ಪರ್ಧಿಸಿದ್ದಾರೆ.  ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಸೀಟು ಹಂಚಿಕೆ ಮಾಡುವುದರಲ್ಲಿ ಟಿಎಂಸಿ ನಂಬಿಕೆ ಹೊಂದಿದೆ, ಮುಂಬರುವ ಗೋವಾ ಚುನಾವಣೆಯಲ್ಲಿ ಎಲ್ಲಾ 40 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಟಿಎಂಸಿ ಘೋಷಿಸಿದೆ.

ಪ್ರಾದೇಶಿಕ ಪಕ್ಷಗಳು ಪ್ರಬಲವಾಗಿರಬೇಕು ಎಂದು ನಾನು ಬಯಸುತ್ತೇನೆ. ಒಕ್ಕೂಟ ರಚನೆಯು ಬಲವಾಗಿರಬೇಕು. ನಾವು ರಾಜ್ಯಗಳನ್ನು ಬಲಿಷ್ಠಗೊಳಿಸಬೇಕು, ರಾಜ್ಯಗಳು ಬಲಿಷ್ಠವಾಗಿದ್ದರೆ ಕೇಂದ್ರವು ಬಲವಾಗಿರುತ್ತದೆ ಎಂದು ಅವರು ಹೇಳಿದರು.

SCROLL FOR NEXT