ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 12,830 ಹೊಸ ಪ್ರಕರಣಗಳು, 446 ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಮತ್ತಷ್ಟು ಇಳಿಕೆಯಾಗಿದೆ. ದೇಶದಲ್ಲಿ ಭಾನುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 12 ಸಾವಿರದ 830 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 446 ಮಂದಿ ಮೃತಪಟ್ಟಿದ್ದಾರೆ. ಕಳೆದ 247 ದಿನಗಳಲ್ಲಿ ಕಡಿಮೆಯಾಗಿದೆ. 

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಮತ್ತಷ್ಟು ಇಳಿಕೆಯಾಗಿದೆ. ದೇಶದಲ್ಲಿ ಭಾನುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 12 ಸಾವಿರದ 830 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 446 ಮಂದಿ ಮೃತಪಟ್ಟಿದ್ದಾರೆ. ಕಳೆದ 247 ದಿನಗಳಲ್ಲಿ ಕಡಿಮೆಯಾಗಿದೆ. 

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,42,73,300ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,58,186ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,59,272ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 14,667 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,36,55,842ರಷ್ಟು ಆಗಿದೆ. ಇದರಲ್ಲಿ ಕೇರಳ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 7,427 ಹೊಸ ಪ್ರಕರಣಗಳು ಪತ್ತೆಯಾಗಿದ್ದು 62 ಮಂದಿ ಮೃತಪಟ್ಟಿದ್ದಾರೆ. ಇನ್ನು ಭಾರತದಲ್ಲಿ ಇದುವರೆಗೆ 60.83 ಕೋಟಿ ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೊರೋನಾ ಚೇತರಿಕೆ ದರ ಪ್ರಸ್ತುತ 98.20%. ಸಕ್ರಿಯ ಪ್ರಕರಣಗಳು ಒಟ್ಟು ಪ್ರಕರಣಗಳಲ್ಲಿ 1% ಕ್ಕಿಂತ ಕಡಿಮೆಯಿವೆ, ಪ್ರಸ್ತುತ 0.46% - ಮಾರ್ಚ್ 2020 ರಿಂದ ಕಡಿಮೆಯಾಗಿದೆ. ಕಳೆದ 27 ದಿನಗಳಲ್ಲಿ ದೈನಂದಿನ ಪಾಸಿಟಿವ್ ದರ (1.13%) 2% ಕ್ಕಿಂತ ಕಡಿಮೆಯಿದೆ. ಕಳೆದ 37 ದಿನಗಳಲ್ಲಿ ವಾರದ ಕೊರೋನಾ ಪಾಸಿಟಿವ್ ದರ (1.18%) 2% ಕ್ಕಿಂತ ಕಡಿಮೆಯಾಗಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ  106.14 ಕೋಟಿ ಜನರಿಗೆ ಲಸಿಕೆಯನ್ನು ನೀಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್