ದೇಶ

ರೈತರ ಟೆಂಟ್ ಗಳನ್ನು ತೆರವುಗೊಳಿಸುವುದರ ವಿರುದ್ಧ ಟಿಕಾಯತ್ ಎಚ್ಚರಿಕೆ

Srinivas Rao BV

ನವದೆಹಲಿ: ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಟೆಂಟ್ ಗಳನ್ನು ತೆರವುಗೊಳಿಸುವುದರ ವಿರುದ್ಧ ಭಾರತೀಯ ಕಿಸಾನ್ ಒಕ್ಕೂಟ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ. 

ಎಎನ್ಐ ನೊಂದಿಗೆ ಮಾತನಾಡಿರುವ ಅವರು, ಸ್ಥಳೀಯ ಆಡಳಿತ ಟೆಂಟ್ ಗಳನ್ನು ತೆರವುಗೊಳಿಸಿದರೆ ರೈತರು ಪೊಲೀಸ್ ಠಾಣೆ ಹಾಗೂ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗಳಲ್ಲಿಯೇ ಟೆಂಟ್ ಗಳನ್ನು ಹಾಕಿಕೊಳ್ಳುತ್ತಾರೆ ಎಂದು ಟಿಕಾಯತ್ ಎಚ್ಚರಿಸಿದ್ದಾರೆ. 

"ಜೆಸಿಬಿಗಳ ಸಹಾಯದಿಂದ ಟೆಂಟ್ ಗಳನ್ನು ಆಡಳಿತ ತೆರವುಗೊಳಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಒಂದು ವೇಳೆ ಅವರು ಅದನ್ನು ಮುಂದುವರೆಸಿದಲ್ಲಿ, ರೈತರು ಪೊಲೀಸ್ ಠಾಣೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗಳಲ್ಲೇ ಟೆಂಟ್ ಗಳನ್ನು ಹಾಕಿಕೊಳ್ಳಲಿದ್ದಾರೆ" ಎಂದು ಎಚ್ಚರಿಸಿದ್ದಾರೆ. 

ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಟಿಕಾಯತ್ ಒತ್ತಾಯಪೂರ್ವಕವಾಗಿ ಟೆಂಟ್ ಗಳನ್ನು ತೆರವುಗೊಳಿಸಲು ಯತ್ನಿಸಿದರೆ ದೇಶಾದ್ಯಂತ ರೈತರು ಸರ್ಕಾರಿ ಕಚೇರಿಗಳನ್ನು ಗಲ್ಲಾ ಮಂಡಿಗಳನ್ನಾಗಿ ಪರಿವರ್ತನೆ ಮಾಡಿಕೊಳ್ಳಲಿದ್ದಾರೆ ಎಂದು ಬರೆದಿದ್ದರು.

ದೆಹಲಿ ಪೊಲೀಸ್ ರು ಗುರುವಾರ ರಾತ್ರಿಯಿಂದ ಟಿಕ್ರಿ ಹಾಗೂ ಘಾಜಿಪುರ್ ಗಡಿಗಳಲ್ಲಿ ರೈತರ ಟೆಂಟ್ ಗಳನ್ನು ತೆರವುಗೊಳಿಸುತ್ತಿದ್ದಾರೆ. ಈ ಮಾರ್ಗವನ್ನು 11 ತಿಂಗಳಿನಿಂದ ಮುಚ್ಚಲ್ಪಟ್ಟಿತ್ತು. ಆದರೆ ಪ್ರಯಾಣಿಕರಿಗೆ ಅನಾನುಕೂಲವಾಗುತ್ತಿತ್ತು. 

SCROLL FOR NEXT