ಗಲ್ಲು 
ದೇಶ

ಉತ್ತರಪ್ರದೇಶ: ಮತಾಂತರವಾಗಲು ವಿರೋಧಿಸಿದ ಪತ್ನಿಯನ್ನು ಕೊಲೆಗೈದ ಪಾಪಿ ಪತಿ

ಮತಾಂತರಕ್ಕೆ ಒಪ್ಪದ ಪತ್ನಿಯನ್ನು ಪತಿಯೇ ಹತ್ಯೆಗೈದಿರುವ ಘಟನೆ ಮಿರ್​​ಗಂಜ್​ ಪೊಲೀಸ್​ ಠಾಣಾ ವ್ಯಾಪ್ತಿಯ ಚುರೈ ದಲ್ಪರ್​ಪುರ ಗ್ರಾಮದಲ್ಲಿ ನಡೆದಿದೆ.

ಮಿರ್​​ಗಂಜ್: ಮತಾಂತರಕ್ಕೆ ಒಪ್ಪದ ಪತ್ನಿಯನ್ನು ಪತಿಯೇ ಹತ್ಯೆಗೈದಿರುವ ಘಟನೆ ಮಿರ್​​ಗಂಜ್​ ಪೊಲೀಸ್​ ಠಾಣಾ ವ್ಯಾಪ್ತಿಯ ಚುರೈ ದಲ್ಪರ್​ಪುರ ಗ್ರಾಮದಲ್ಲಿ ನಡೆದಿದೆ.

ನಿಶಾ (28) ಮೃತ ಮಹಿಳೆ. ಅವರು ಮಂಗಳವಾರ ರಾತ್ರಿ ತಮ್ಮ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮರುದಿನ ಅವರ ಮರಣೋತ್ತರ ಪರೀಕ್ಷೆಯ ವರದಿ ಬಂದಾಗ, ಯಾರೋ ಆಕೆಯನ್ನು ಹಗ್ಗದಿಂದ ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ನೇತು ಹಾಕಿದ್ದಾರೆ ಎಂಬುದು ತಿಳಿದುಬಂದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ರಾಜ್ ಕುಮಾರ್ ಅಗರ್ವಾಲ್ ಹೇಳಿದ್ದಾರೆ.

ನಿಶಾ ಅವರ ತಾಯಿ ಕೌಶಲ್ ದೇವಿ ಗುರುವಾರ ತಮ್ಮ ಅಳಿಯ ಇಕ್ಬಾಲ್ ಮತ್ತು ಆತನ ಸಹಚರರ ವಿರುದ್ಧ ದೂರು ದಾಖಲಿಸಿದ್ದರು. ಅಲ್ಲದೇ ಇಕ್ಬಾಲ್ ನನ್ನ ಮಗಳನ್ನು ಇಸ್ಲಾಂಗೆ ಮತಾಂತರಿಸಲು ಪದೇ ಪದೇ ಪ್ರಯತ್ನಿಸುತ್ತಿದ್ದ, ಇದಕ್ಕೆ ಆಕೆ ವಿರೋಧಿಸಿದ ಕಾರಣಕ್ಕೆ ಸ್ನೇಹಿತರ ಸಹಾಯದಿಂದ ಇಕ್ಬಾಲ್ ಕೊಂದಿದ್ದಾನೆ ಎಂದು ತಾಯಿ ಆರೋಪಿಸಿದ್ದಾರೆ. 

ಮೃತಳ ತಾಯಿಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಎಸ್ ಪಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಮಗ್ರತೆ, ಸಮರ್ಪಣೆ ಉದ್ದೇಶದೊಂದಿಗೆ ಕರ್ನಾಟಕ ಜನತೆಗೆ ಸೇವೆ ಸಲ್ಲಿಸಲು ಬದ್ಧ: ಡಿಕೆ ಶಿವಕುಮಾರ್

ದೆಹಲಿಯ ಮೆಹ್ರೌಲಿಯಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ!

ಸಿದ್ದರಾಮಯ್ಯಗೆ ವಿಶ್ರಾಂತಿ ನೀಡಲ್ಲ, ಅವರ ಸೇವೆ ಇನ್ನೂ ಅಗತ್ಯವಿದೆ: CLP ಸಭೆಯಲ್ಲಿ ವೇಣುಗೋಪಾಲ್ ಭಾವುಕ

ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ: ಡಿಕೆಶಿಗೆ ಸಿದ್ದು ಪತ್ರ!

ಲೋಕಭವನಕ್ಕೆ ತೆರಳಿದ ಡಿ.ಕೆ ಶಿವಕುಮಾರ್: ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ; ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣವಚನ!

SCROLL FOR NEXT