ಸಾಂದರ್ಭಿಕ ಚಿತ್ರ 
ದೇಶ

5-18 ವರ್ಷದ ಮಕ್ಕಳ ಮೇಲೆ 'ಬಯೋಲಾಜಿಕಲ್ ಇ' ಲಸಿಕೆ ಪ್ರಯೋಗಕ್ಕೆ ಡಿಸಿಜಿಐ ಅನುಮತಿ

ಕೆಲವೊಂದು ಷರತ್ತುಗಳೊಂದಿಗೆ 5 ರಿಂದ 18 ವರ್ಷದೊಳಗಿನ ಮಕ್ಕಳ ಮೇಲೆ ಹೈದ್ರಾಬಾದ್ ಮೂಲದ ಬಯೋಲಾಜಿಕಲ್ ಇ ಲಿಮಿಟೆಡ್ ತಯಾರಿಸಿರುವ ಸ್ವದೇಶಿ ಕೋವಿಡ್-19 ಲಸಿಕೆಯ ಎರಡು ಮತ್ತು ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ (ಡಿಸಿಜಿಐ) ಅನುಮತಿ ನೀಡಿದೆ ಎಂದು ಮೂಲಗಳು ಹೇಳಿವೆ.

ನವದೆಹಲಿ: ಕೆಲವೊಂದು ಷರತ್ತುಗಳೊಂದಿಗೆ 5 ರಿಂದ 18 ವರ್ಷದೊಳಗಿನ ಮಕ್ಕಳ ಮೇಲೆ ಹೈದ್ರಾಬಾದ್ ಮೂಲದ ಬಯೋಲಾಜಿಕಲ್ ಇ ಲಿಮಿಟೆಡ್ ತಯಾರಿಸಿರುವ ಸ್ವದೇಶಿ ಕೋವಿಡ್-19 ಲಸಿಕೆಯ ಎರಡು ಮತ್ತು ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ (ಡಿಸಿಜಿಐ) ಅನುಮತಿ ನೀಡಿದೆ ಎಂದು ಮೂಲಗಳು ಹೇಳಿವೆ.

ಅನುಮೋದಿತ ಶಿಷ್ಟಾಚಾರದ ಪ್ರಕಾರ ದೇಶದ ಹತ್ತು ಕಡೆಗಳಲ್ಲಿ ಎರಡು ಹಾಗೂ ಮೂರನೇ ಹಂತದ ಪ್ರಯೋಗಗಳು ನಡೆಯಲಿದ್ದು, ಕೋವಿಡ್-19 ಕುರಿತ ವಿಷಯ ತಜ್ಞರ ಸಮಿತಿ ಶಿಫಾರಸ್ಸಿನ ಆಧಾರದ ಮೇಲೆ ಡಿಸಿಜಿಐ ಅನುಮತಿ ನೀಡಿದೆ.

ಈವರೆಗೆ ದೇಶದಲ್ಲಿ 12 ರಿಂದ 18 ವರ್ಷದೊಳಗಿನವರಿಗಾಗಿ ಜಿಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿರುವ ಸೂಜಿ ರಹಿತ ಕೋವಿಡ್-19 ಲಸಿಕೆ ಜಿಕೋವ್- ಡಿ ತುರ್ತು ಬಳಕೆಗೆ ಔಷಧ ನಿಯಂತ್ರಕರಿಂದ ಅನುಮತಿ ಸಿಕ್ಕಿದೆ. 

ಈ ಮಧ್ಯೆ 2 ರಿಂದ 18 ವರ್ಷದೊಳಗಿನವರಿಗಾಗಿ ಭಾರತ್ ಬಯೋಟೆಕ್ ತಯಾರಿಸಿರುವ ಕೋವಾಕ್ಸಿನ್ ಲಸಿಕೆಯ ಎರಡು ಹಾಗೂ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ನಡೆಯುತ್ತಿದೆ. ಕೆಲವೊಂದು ಷರತ್ತುಗಳೊಂದಿಗೆ  2 ರಿಂದ 17 ವರ್ಷದ ಮಕ್ಕಳ ಮೇಲೆ ಕೋವೊವ್ಯಾಕ್ಸ್ ನ ಎರಡು ಹಾಗೂ ಮೂರನೇ ಹಂತದ ಪ್ರಯೋಗ ನಡೆಸಲು ಸೆರಂ ಇನ್ಸಿಟಿಟ್ಯೂಟ್ ಗೆ ಭಾರತೀಯ ಔಷಧ ನಿಯಂತ್ರಕ ಮಂಡಳಿ ಅನುಮತಿ ನೀಡಿದೆ.

ಹದಿಹರೆದವರ ಮೇಲೆ ಬಯೋಲಾಜಿಕಲ್ ಇ ಕಂಪನಿಯ ಕೊರೋನಾ ವಿರೋಧಿ ಲಸಿಕೆ ಕಾರ್ಬೆವಾಕ್ಸ್ ನ ಎರಡು ಹಾಗೂ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ನಡೆಯುತ್ತಿರುವುದಾಗಿ ಮೂಲಗಳು ಈ ಹಿಂದೆ ಹೇಳಿದ್ದವು. ಡಿಸೆಂಬರ್ ಅಂತ್ಯದೊಳಗೆ 30 ಕೋಟಿ ಡೋಸ್ ಕಾರ್ಬೆವಾಕ್ಸ್ ನ್ನು ಕೇಂದ್ರ ಸರ್ಕಾರಕ್ಕೆ ಬಯೋಲಾಜಿಕಲ್ ಇ ಕಂಪನಿ ಪೂರೈಸಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಜೂನ್ ನಲ್ಲಿ ತಿಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!