ರಾಜೀವ್ ಗಾಂಧಿ 
ದೇಶ

ಅಸ್ಸಾಂ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನದ ಹೆಸರು ಬದಲಾವಣೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ

ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ್ನು ಒರಾಂಗ್ ರಾಷ್ಟ್ರೀಯ ಉದ್ಯಾನವನ ಎಂದು ಮರುನಾಮಕರಣ ಮಾಡಿದ್ದು, ಇದಕ್ಕೆ ಅಸ್ಸಾಂ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಗುವಾಹಟಿ: ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ್ನು ಒರಾಂಗ್ ರಾಷ್ಟ್ರೀಯ ಉದ್ಯಾನವನ ಎಂದು ಮರುನಾಮಕರಣ ಮಾಡಿದ್ದು, ಇದಕ್ಕೆ ಅಸ್ಸಾಂ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಆದಿವಾಸಿ ಮತ್ತು ಟೀ ಬುಡಕಟ್ಟು ಸಮುದಾಯದ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. 

ಬಿಜೆಪಿ ಸರ್ಕಾರದ "ಇಂತಹ ಸಣ್ಣ ವರ್ತನೆಗಳನ್ನು" ಕಾಂಗ್ರೆಸ್ ಖಂಡಿಸುತ್ತದೆ. ಪಾರ್ಕ್ ಅಥವಾ ಸಂಸ್ಥೆಯ ಹೆಸರನ್ನು ಬದಲಿಸುವ ಮೂಲಕ ಬಿಜೆಪಿ ಸರ್ಕಾರ ಭಾರತದ ಭವಿಷ್ಯದ ವಾಸ್ತುಶಿಲ್ಪಿ ಗಾಂಧಿಯ ಕೊಡುಗೆಗಳನ್ನು ಅಳಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

"ರಾಜೀವ್ ಗಾಂಧಿ ಅವರು ತಂದ ಐಟಿ ಕ್ರಾಂತಿಯಿಂದ ಇಂದು ಬಿಜೆಪಿ ಬಳಸುತ್ತಿರುವ ಕಂಪ್ಯೂಟರ್‌ಗಳು ಮತ್ತು ಮೊಬೈಲ್ ಫೋನ್‌ಗಳು ಅವರಿಗೆ ಲಭ್ಯವಾಗಿವೆ. ಅವುಗಳಿಂದ ಇತಿಹಾಸವನ್ನು ಪುನಃ ಬರೆಯುವ ಕಾರ್ಯಸೂಚಿಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ" ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಕುಮಾರ್ ಬೋರಾಹ್ ಹೇಳಿದ್ದಾರೆ.

ಪಂಚಾಯಿತಿಯಲ್ಲಿ ಶೆ. 33 ರ ಮೀಸಲಾತಿಯ ಮೂಲಕ ತಳಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಗಾಂಧಿಯವರ ಕೊಡುಗೆಯನ್ನು ಯಾರೂ ಅಳಿಸಲು ಸಾಧ್ಯವಿಲ್ಲ ಮತ್ತು ಮತದಾನದ ವಯಸ್ಸನ್ನು 21 ರಿಂದ 18 ವರ್ಷಗಳಿಗೆ ಇಳಿಸುವ ಮೂಲಕ ರಾಜಕೀಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಯುವಕರನ್ನು ಪ್ರೋತ್ಸಾಹಿಸಿದರು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT