ಸೈಯದ್ ಅಲಿ ಶಾ ಗಿಲಾನಿ 
ದೇಶ

ಜಮ್ಮು ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ನಿಧನ

ಹುರಿಯತ್ ಮುಖಂಡ ಸೈಯದ್ ಅಲಿ ಶಾ ಗಿಲಾನಿ ನಿಧನರಾಗಿದ್ದಾರೆ. ಗಿಲಾನಿ ಜಮ್ಮು ಕಾಶ್ಮೀರದಲ್ಲಿ ಭಾರತದ ಪ್ರತ್ಯೇಕತಾ ಹೋರಾಟ ನಡೆಸುತ್ತಿದ್ದರು.

ಶ್ರೀನಗರ: ಹುರಿಯತ್ ಮುಖಂಡ ಸೈಯದ್ ಅಲಿ ಶಾ ಗಿಲಾನಿ ನಿಧನರಾಗಿದ್ದಾರೆ. ಗಿಲಾನಿ ಜಮ್ಮು ಕಾಶ್ಮೀರದಲ್ಲಿ ಭಾರತದ ಪ್ರತ್ಯೇಕತಾ ಹೋರಾಟ ನಡೆಸುತ್ತಿದ್ದರು.

ತೆಹ್ರಿಕ್-ಎ-ಹುರಿಯತ್ ಎಂಬ ಕಟ್ಟರ್ ಪ್ರತ್ಯೇಕತಾವಾದಿ ಸಂಘಟನೆಯ ಸಂಸ್ಥಾಪಕ ಸಯದ್ ಅಲಿ ಶಾ ಗಿಲಾನಿ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿಲಾನಿ ಅವರಿಗೆ 92 ವರ್ಷ ವಯಸ್ಸಾಗಿತ್ತು. ಸೈಯದ್ ಗಿಲಾನಿ ಮೂರು ದಶಕಗಳಿಗೂ ಹೆಚ್ಚಿನ ಕಾಲ ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕ ರಾಜ್ಯವಾಗಬೇಕು ಎಂದು ಹೋರಾಟ ನಡೆಸಿದ್ದರು, ಬಳಿಕ ತಮ್ಮ ಸ್ಥಾನಕ್ಕೆ ಕಳೆದ ವರ್ಷವಷ್ಟೇ ರಾಜೀನಾಮೆ ನೀಡಿದ್ದರು.

ನೂರಾರು ಕೋಟಿ ರು ಒಡೆಯ ಗಿಲಾನಿ ಅಲ್ಲದೆ ಪುತ್ರರಾದ ನಾಸೀಮ್ ನಯೀಮ್, ಪುತ್ರಿಯರಾದ ಅನಿಷಾ, ಫಾರ್ ಹಾತ್ ಸೇರಿ ಆರು ಜನರ ಮೇಲೆ ಎನ್ಐಎ ಅಧಿಕಾರಿಗಳು ಕಣ್ಣಿಟ್ಟಿದ್ದು, ಅಕ್ರಮ ಆಸ್ತಿ ಗಳಿಕೆ, ಪಾಕಿಸ್ತಾನದಿಂದ ಹಣ ಪಡೆದು, ಕಣಿವೆ ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಬಳಕೆ ಮುಂತಾದ ಆರೋಪಗಳ ಕುರಿತ ತನಿಖೆ ಜಾರಿಯಲ್ಲಿದೆ. 1972, 1977, 1987ರಲ್ಲಿ ಸೋಪೋರ್ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಚುನಾಯಿತರಾದ ಅವರು ಕಾಶ್ಮೀರದ ಪ್ರತ್ಯೇಕತಾವಾದಿಗಳಿಗೆ ಧ್ವನಿಯಾಗಿದ್ದರು

ಅವರು ಇಬ್ಬರು ಗಂಡು ಮಕ್ಕಳು ಸೇರಿ ಆರು ಮಕ್ಕಳನ್ನ ಅಗಲಿದ್ದಾರೆ. ಕಳೆದ 20 ವರ್ಷಗಳಿಂದ ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಗಿಲಾನಿ ನಿನ್ನೆ ರಾತ್ರಿ 10.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಮೂರು ಬಾರಿ ಶಾಸಕರಾಗಿದ್ದ ಗೀಲಾನಿ ಅವರ ನಿಧನಕ್ಕೆ ಹಲವು ಕಾಶ್ಮೀರ ರಾಜಕಾರಣಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಗಿಲಾನಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್