ಸಾಂದರ್ಭಿಕ ಚಿತ್ರ 
ದೇಶ

ಬಂಗಾಳ ಚುನಾವಣೋತ್ತರ ಹಿಂಸಾಚಾರ: ಎಸ್ಐಟಿಗೆ ಸಹಾಯ ಮಾಡಲು 10 ಐಪಿಎಸ್ ಅಧಿಕಾರಿಗಳ ನೇಮಕ

ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳ ತನಿಖೆಗಾಗಿ ಕಲ್ಕತ್ತಾ ಹೈಕೋರ್ಟ್ ರಚಿಸಿದ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಸಹಾಯ ಮಾಡಲು ಪಶ್ಚಿಮ ಬಂಗಾಳ ಸರ್ಕಾರ ಹತ್ತು ಐಪಿಎಸ್ ಅಧಿಕಾರಿಗಳನ್ನು ನೇಮಿಸಿದೆ..

ಕೋಲ್ಕತ್ತಾ: ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳ ತನಿಖೆಗಾಗಿ ಕಲ್ಕತ್ತಾ ಹೈಕೋರ್ಟ್ ರಚಿಸಿದ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಸಹಾಯ ಮಾಡಲು ಪಶ್ಚಿಮ ಬಂಗಾಳ ಸರ್ಕಾರ ಹತ್ತು ಐಪಿಎಸ್ ಅಧಿಕಾರಿಗಳನ್ನು ನೇಮಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಅಧಿಕಾರಿಗಳನ್ನು ರಾಜ್ಯದ ಉತ್ತರ, ಪಶ್ಚಿಮ ಮತ್ತು ದಕ್ಷಿಣ ವಲಯಗಳಿಗೆ ಹಾಗೂ ಕೋಲ್ಕತಾ ಪೊಲೀಸ್ ಪ್ರದೇಶಗಳಿಗೆ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

"ಐಪಿಎಸ್ ಅಧಿಕಾರಿಗಳ ಸೇವೆಯನ್ನು ಅವರ ಸಾಮಾನ್ಯ ಕರ್ತವ್ಯಗಳ ಜೊತೆಗೆ ಗೌರವಾನ್ವಿತ ಹೈಕೋರ್ಟ್ ರಚಿಸಿದ ಎಸ್ಐಟಿಗೆ ಸಹಾಯ ಮಾಡಲು ನಿಯೋಜಿಸಲಾಗಿದೆ" ಎಂದು ರಾಜ್ಯ ಗೃಹ ಇಲಾಖೆಯು ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಆಗಸ್ಟ್ 19 ರಂದು ಕಲ್ಕತ್ತಾ ಹೈಕೋರ್ಟ್‌ನ ಐವರು ನ್ಯಾಯಾಧೀಶರ ಪೀಠ, ಚುನಾವಣೆಯ ನಂತರದ ಹಿಂಸಾಚಾರದ ಘಟನೆಗಳ ಬಗ್ಗೆ ತನಿಖೆ ನಡೆಸಲು ಐಪಿಎಸ್ ಅಧಿಕಾರಿಗಳಾದ ಸೌಮೆನ್ ಮಿತ್ರಾ, ಸುಮನ್ ಬಾಲಾ ಸಾಹೂ ಮತ್ತು ರಣಬೀರ್ ಕುಮಾರ್ ಅವರನ್ನು ಒಳಗೊಂಡ ವಿಶೇಷ ತನಿಖಾ ತಂಡ ರಚನೆ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

SCROLL FOR NEXT