ಸಚಿನ್ ವಾಜೆ 
ದೇಶ

ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣ: ಸಚಿನ್ ವಾಜೆ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಎನ್ಐಎ

ಉದ್ಯಮಿ ಮುಕೇಶ್‌ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಫೋಟಕ ಪತ್ತೆ ಮತ್ತು ಮನ್ಸುಖ್ ಹಿರೇನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಹಾಗೂ ಇತರ ಆರೋಪಿಗಳ ವಿರುದ್ಧ ರಾಷ್ಟ್ರೀಯ...

ಮುಂಬೈ: ಉದ್ಯಮಿ ಮುಕೇಶ್‌ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಫೋಟಕ ಪತ್ತೆ ಮತ್ತು ಮನ್ಸುಖ್ ಹಿರೇನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಹಾಗೂ ಇತರ ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದೆ.

ಕೇಂದ್ರ ತನಿಖಾ ಸಂಸ್ಥೆ ಇಂದು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದು, ವಾಜೆ ಜೊತೆಗೆ, ಮಾಜಿ 'ಎನ್ಕೌಂಟರ್ ಸ್ಪೆಷಲಿಸ್ಟ್' ಪ್ರದೀಪ್ ಶರ್ಮಾ ಮತ್ತು ಇತರ ಕೆಲವು ಮಾಜಿ ಪೊಲೀಸ್ ಸಿಬ್ಬಂದಿಗಳು ಕೂಡ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕಳೆದ ತಿಂಗಳು ನ್ಯಾಯಾಲಯ ನೀಡಿದ್ದ 30 ದಿನಗಳ ಗಡುವು ಅಂತ್ಯಕ್ಕೆ ಎರಡು ದಿನಗಳ ಮೊದಲು ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಎನ್ಐಎ ಪರ ವಕೀಲರು ತಿಳಿಸಿದ್ದಾರೆ.

ಫೆ. 25ರಂದು ಮುಕೇಶ್ ಅಂಬಾನಿ ಅವರ ನಿವಾಸದ ಬಳಿ ಸ್ಫೋಟಕ ತುಂಬಿದ್ದ ವಾಹನ ಪತ್ತೆಯಾಗಿತ್ತು. ಈ ಕುರಿತು ಪ್ರಕರಣದ ತನಿಖೆಯನ್ನು ಎನ್ಐಎ ನಡೆಸುತ್ತಿದೆ. ಸ್ಫೋಟಕ ತುಂಬಿದ್ದ ವಾಹನದಲ್ಲಿ ಬೆದರಿಕೆಯ ಪತ್ರವೂ ಇತ್ತು. 

ಮುಕೇಶ್ ಅವರ ನಿವಾಸ ಆಂಟಿಲಿಯಾ ಬಳಿ ಪತ್ತೆಯಾಗಿದ್ದ ವಾಹನವು ಮನ್‌ಸುಖ್ ಹಿರೇನ್ ಅವರಿಗೆ ಸೇರಿದ್ದಾಗಿತ್ತು, ಈ ವಾಹನ ಕಳವಾಗಿದ್ದ ಕುರಿತು ಕೆಲವು ದಿನಗಳ ಹಿಂದೆಯಷ್ಟೇ ಹಿರೇನ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಮಾರ್ಚ್ 5ರಂದು ಹಿರೇನ್ ಅವರ ಶವವು ಠಾಣೆ ಸಮೀಪ ಪತ್ತೆಯಾಗಿತ್ತು.

ಗಂಡನ ಅನುಮಾನಾಸ್ಪದ ಸಾವಿನಲ್ಲಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರ ಪಾತ್ರವಿದೆಯೆಂದು ಆರೋಪಿಸಿ ಹಿರೇನ್ ಅವರ ಪತ್ನಿ ಅನುಮಾನ ವ್ಯಕ್ತಪಡಿಸಿದ್ದರು. ಈ ಕಾರಣಕ್ಕಾಗಿ ಸಚಿನ್ ಅವರನ್ನು ಮುಂಬೈ ಅಪರಾಧ ತನಿಖಾ ದಳದಿಂದ ಹೊರಗಿಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT