ಭಾರತೀಯ ಸೇನೆ 
ದೇಶ

ಭಾರತದ ಗಡಿಯೊಳಗೆ ನುಗ್ಗಲು ಯತ್ನಿಸಿದ ಶಸ್ತ್ರಸಜ್ಜಿತ ಉಗ್ರರು, ಯೋಧರ ಗುಂಡಿನ ದಾಳಿ ಬೆನ್ನಲ್ಲೇ ಪರಾರಿ!

ಆಫ್ಘಾನಿಸ್ತಾನ ತಾಲಿಬಾನ್ ತೆಕ್ಕೆಗೆ ಜಾರಿದ ಬೆನ್ನಲ್ಲೇ ಇತ್ತ ಇಂಡೋ-ಪಾಕ್ ಗಡಿಯಲ್ಲಿ ಉಗ್ರ ಚಟುವಟಿಕೆ ತೀವ್ರಗೊಂಡಿದ್ದು, ಇಂದು ಮುಂಜಾನೆ ಶಸ್ತ್ರಸಜ್ಜಿತ ಉಗ್ರರು ಭಾರತದ ಗಡಿಯೊಳಗೆ ನುಗ್ಗಲು ಯತ್ನಿಸಿದ್ದಾರೆ.

ಶ್ರೀನಗರ: ಆಫ್ಘಾನಿಸ್ತಾನ ತಾಲಿಬಾನ್ ತೆಕ್ಕೆಗೆ ಜಾರಿದ ಬೆನ್ನಲ್ಲೇ ಇತ್ತ ಇಂಡೋ-ಪಾಕ್ ಗಡಿಯಲ್ಲಿ ಉಗ್ರ ಚಟುವಟಿಕೆ ತೀವ್ರಗೊಂಡಿದ್ದು, ಇಂದು ಮುಂಜಾನೆ ಶಸ್ತ್ರಸಜ್ಜಿತ ಉಗ್ರರು ಭಾರತದ ಗಡಿಯೊಳಗೆ ನುಗ್ಗಲು ಯತ್ನಿಸಿದ್ದಾರೆ.

ಹೌದು..  ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹೊಂದಿದ್ದ ಭಯೋತ್ಪಾದಕರ ಗುಂಪೊಂದು ಒಳನುಸುಳುವಿಕೆಗೆ ಪ್ರಯತ್ನಿಸಿದ್ದು, ಈ ವೇಳೆ ಅಲ್ಲೇ ಗಸ್ತು ತಿರುಗುತ್ತಿದ್ದ ಭಾರತೀಯ ಸೇನೆಯು ಉಗ್ರರತ್ತ ಗುಂಡು ಹಾರಿಸಿ ಅವರ ಪ್ರಯತ್ನವನ್ನು ವಿಫಲಗೊಳಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸೇನಾ ಪಡೆಯ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ಅವರು, 'ಭಾರತೀಯ ಸೇನೆಯ ವಿಚಕ್ಷಣ ಪಡೆಗಳಿಂದ ಒಳನುಸುಳುವಿಕೆ ಪ್ರಯತ್ನ ಪತ್ತೆಯಾಗಿದ್ದು, ನಿನ್ನೆ ರಾತ್ರಿ (ಗುರುವಾರ) ಪೂಂಚ್ ಸೆಕ್ಟರ್‌ನಲ್ಲಿ ಎಲ್‌ಒಸಿ ಉದ್ದಕ್ಕೂ ಭಾರೀ ಶಸ್ತ್ರಸಜ್ಜಿತ ಪಾಕಿಸ್ತಾನಿ ಭಯೋತ್ಪಾದಕರ ಗುಂಪು ಒಳನುಸುಳಲು ಪ್ರಯತ್ನಿಸಿತು. ಈ ವೇಳೆ ಕೂಡಲೇ ಸೈನಿಕರು ಅವರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದು, ಗುಂಡಿನ ದಾಳಿ ಆರಂಭವಾದ ಬೆನ್ನಲ್ಲೇ ಉಗ್ರರು ಪಾಕಿಸ್ತಾನದತ್ತ ಪರಾರಿಯಾಗಿದ್ದಾರೆ ಎಂದು ಹೇಳಿದರು.

ಭಾರಿ ಪ್ರಮಾಣದ ಸಾಮಗ್ರಿ ವಶಕ್ಕೆ
ಅಂತೆಯೇ ಈ ಪ್ರದೇಶ ಅತ್ಯಂತ ದುರ್ಗಮವಾಗಿದ್ದು, ಭಾರೀ ಗಿಡಗಂಟೆಗಳಿಂದ ಕೂಡಿದೆ. ಹೀಗಾಗಿ ಇಲ್ಲಿ ರಾತ್ರಿ ವೇಳೆ ಸುಲಭವಾಗಿ ಭಾರತದ ಗಡಿಯೊಳಗೆ ನುಸುಳ ಬಹುದು ಎಂಬುದು ಉಗ್ರರ ಲೆಕ್ಕಾಚಾರವಾಗಿತ್ತು. ಆದರೆ ಉಗ್ರರ ಈ ಪ್ರಯತ್ನವನ್ನು ನಮ್ಮ ಸೈನಿಕರು ವಿಫಲಗೊಳಿಸಿದ್ದಾರೆ.  ಎನ್ಕೌಂಟರ್ ಸ್ಥಳದಲ್ಲಿ ಸಂಪೂರ್ಣ ಶೋಧ ನಡೆಸಲಾಗಿದ್ದು, ಭಯೋತ್ಪಾದಕರು ಬಿಟ್ಟು ಹೋಗಿದ್ದ ಅಪಾರ ಪ್ರಮಾಣದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ, ಇದರಲ್ಲಿ ಬಟ್ಟೆ, ಪ್ಯಾಕೇಜ್ ಮಾಡಿದ ಆಹಾರ ಪದಾರ್ಥಗಳು ಮತ್ತು ಪಾಕಿಸ್ತಾನದ ಗುರುತುಗಳನ್ನು ಹೊಂದಿರುವ ಔಷಧಗಳು ಸೇರಿವೆ ಎಂದು ಲೆಫ್ಟಿನೆಂಟ್ ಕರ್ನಲ್ ಆನಂದ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!