ಸಂಗ್ರಹ ಚಿತ್ರ 
ದೇಶ

ಕೇರಳದ ಕೋಳಿಕೋಡ್'ನಲ್ಲಿ ನಿಫಾ ವೈರಸ್ ಪತ್ತೆ; 13 ವರ್ಷದ ಬಾಲಕ ಆಸ್ಪತ್ರೆಗೆ ದಾಖಲು

ಕೇರಳದ ರಾಜ್ಯದ ಕೋಳಿಕೋಡ್ ನಲ್ಲಿ ನಿಫಾ ವೈರಸ್ ಸೋಂಕನ್ನು ಹೋಲುವ ಲಕ್ಷಣಗಳನ್ನು ಹೊಂದಿದ್ದ 13 ವರ್ಷದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ಭಾನುವಾರ ತಿಳಿಸಿವೆ.

ಕೋಳಿಕೋಡ್: ಕೇರಳದ ರಾಜ್ಯದ ಕೋಳಿಕೋಡ್ ನಲ್ಲಿ ನಿಫಾ ವೈರಸ್ ಸೋಂಕನ್ನು ಹೋಲುವ ಲಕ್ಷಣಗಳನ್ನು ಹೊಂದಿದ್ದ 13 ವರ್ಷದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ಭಾನುವಾರ ತಿಳಿಸಿವೆ.

ಸೋಂಕಿಗೊಳಗಾಗಿರುವ ಬಾಲಕ ಛತಮಂಗಳಂ ಹತ್ತಿರ ಬಳಿಯಿರುವ ಚುಲೂರ್ ಮೂಲದವನಾಗಿದ್ದಾನೆಂದು ತಿಳಿದುಬಂದಿದೆ. 

ನಿಫಾ ಸೋಂಕಿನ ಶಂಕೆ ವ್ಯಕ್ತವಾಗಿರುವ ಮಾಹಿತಿಯ ನಂತರ ರಾಜ್ಯ ಸರ್ಕಾರ ಶನಿವಾರ ತಡರಾತ್ರಿ ಆರೋಗ್ಯ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿವೆ.

ಕೆಲ ದಿನಗಳ ಹಿಂದಷ್ಟೇ ಬಾಲಕ ಅತೀವ್ರ ಜ್ವರದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದ. ಪ್ರಥಮಿಕ ಪರೀಕ್ಷೆಗಳಿಂದ ಬಾಲಕನಿಗೆ ನಿಫಾ ವೈರಸ್ ಸೋಂಕು ಇರುವ ಶಂಕೆಗಳು ವ್ಯಕ್ತವಾಗಿವೆ ಎಂದು ತಿಳಿದುಬಂದಿದೆ. 

ರಾಜ್ಯದಲ್ಲಿ ನಿಫಾ ವೈರಸ್ ಇರುವ ಬಗ್ಗೆ ರಾಜ್ಯ ಸರ್ಕಾರ ಇನ್ನೂ ಅಧಿಕೃತವಾಗಿ ಘೋಷಿಸದಿದ್ದರೂ, ಆರೋಗ್ಯ ಸಚಿವರು ಭಾನುವಾರ ಬೆಳಿಗ್ಗೆ ಕೋಳಿಕೋಡ್‌ಗೆ ಧಾವಿಸಿ ಪರಿಸ್ಥಿತಿಯ ಅವಲೋಕನ ನಡೆಸಬಹುದು ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗಾಗಿ ನೀರೀಕ್ಷಿಸಲಾಗುತ್ತಿದೆ.

ದಕ್ಷಿಣ ಭಾರತದಲ್ಲಿ ಮೊದಲ ನಿಫಾ ವೈರಸ್ ರೋಗ (ಎನ್ಐವಿ) ಮೇ 19, 2018 ರಂದು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ವರದಿಯಾಗಿತ್ತು. 2018ರ ಜೂನ್ 1 ರವರೆಗೆ ರಾಜ್ಯದಲ್ಲಿ 17 ಸಾವುಗಳಿಗೆ ಮತ್ತು 18 ದೃಢಪಟ್ಟ ಪ್ರಕರಣಗಳು ವರದಿಯಾಗಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT