ಅಶೋಕ್ ಗೆಹ್ಲೋಟ್ 
ದೇಶ

ಸಮಯ ಬಂದಾಗ ರೈತರು ಬಿಜೆಪಿಗೆ ಪಾಠ ಕಲಿಸುತ್ತಾರೆ: ರಾಜಸ್ಥಾನ ಸಿಎಂ ಗೆಹ್ಲೋಟ್

ವಿವಾದಾತ್ಮಕ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಕೇಂದ್ರದ ಬಿಜೆಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಸಮಯ ಬಂದಾಗ ದೇಶದ ರೈತರು ಕೇಸರಿ ಪಕ್ಷಕ್ಕೆ ಪಾಠ ಕಲಿಸುತ್ತಾರೆ...

ಜೈಪುರ: ವಿವಾದಾತ್ಮಕ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಕೇಂದ್ರದ ಬಿಜೆಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಸಮಯ ಬಂದಾಗ ದೇಶದ ರೈತರು ಕೇಸರಿ ಪಕ್ಷಕ್ಕೆ ಪಾಠ ಕಲಿಸುತ್ತಾರೆ ಎಂದು ಭಾನುವಾರ ಹೇಳಿದ್ದಾರೆ.

ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ 'ಕಿಸಾನ್ ಮಹಾಪಂಚಾಯತ್' ನಲ್ಲಿ ನೆರೆದಿದ್ದ ಜನಸಮೂಹ ಬಿಜೆಪಿಯಿಂದ ಬೇಸತ್ತಿದೆ ಎಂದು ರಾಜಸ್ಥಾನ ಸಿಎಂ ಹೇಳಿದ್ದಾರೆ.

ಮುಜಫರ್‌ನಗರದ ಮಹಾಪಂಚಾಯತ್‌ನಲ್ಲಿ ಭಾನುವಾರ ಸಾವಿರಾರು ರೈತರು ಜಮಾಯಿಸಿದರು. ಅಲ್ಲಿ ಬಿಕೆಯು ನಾಯಕ ರಾಕೇಶ್ ಟಿಕೈತ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರನ್ನು "ಗಲಭೆಕೋರರು" ಎಂದು ಕರೆದರು ಮತ್ತು 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷವನ್ನು ಸೋಲಿಸಬೇಕು ಎಂದು ಕರೆ ನೀಡಿದರು.

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ(SKM) ಈ ಕಾರ್ಯಕ್ರಮವನ್ನು ಆಯೋಜಿಸಿದೆ. 

ರಾಜಸ್ಥಾನದ ಆರು ಜಿಲ್ಲೆಗಳ ಪಂಚಾಯತ್ ಚುನಾವಣೆ ಫಲಿತಾಂಶಗಳನ್ನು ಉಲ್ಲೇಖಿಸಿ, ಗೆಹ್ಲೋಟ್ ಅವರು ಬಿಜೆಪಿ ವಿರುದ್ಧ ಜನರಿಗೆ ಸಾಕಷ್ಟು ಅಸಮಾಧಾನವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ