ದೇಶ

ನನ್ನ ವಿರುದ್ಧದ ಯಾವುದೇ ಭ್ರಷ್ಟಾಚಾರ ಆರೋಪ ಸಾಬೀತಾದರೆ ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ: ಅಭಿಷೇಕ್ ಬ್ಯಾನರ್ಜಿ

Lingaraj Badiger

ಕೋಲ್ಕತಾ: ನಾನು ಯಾವುದೇ ಕಾನೂನುಬಾಹಿರ ವಹಿವಾಟಿನಲ್ಲಿ ಭಾಗಿಯಾಗಿರುವುದನ್ನು ಕೇಂದ್ರ ತನಿಖಾ ಸಂಸ್ಥೆಗಳು ಸಾಬೀತುಪಡಿಸಿದರೆ ಸಾರ್ವಜನಿಕವಾಗಿ ನೇಣಿ ಹಾಕಿಕೊಳ್ಳುತ್ತೇನೆ ಎಂದು ಹಿರಿಯ ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ ಅವರು ಭಾನುವಾರ ಹೇಳಿದ್ದಾರೆ.

ಟಿಎಂಸಿ ಸಂಸದನಿಗೆ ಕಲ್ಲಿದ್ದಲು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್‌ ನೀಡಿದ್ದು, ವಿಚಾರಣೆಗೆ ಹಾಜರಾಗಲು ದೆಹಲಿಗೆ ತೆರಳುತ್ತಿದ್ದಾಗ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜಕೀಯ ಸೇಡು ತೀರಿಸಿಕೊಂಡಿದೆ ಎಂದು ಆರೋಪಿಸಿದರು.

"ನವೆಂಬರ್‌ನಲ್ಲಿ ನಾನು ಸಾರ್ವಜನಿಕ ಸಭೆಗಳಲ್ಲಿ ಹೇಳಿದ್ದನ್ನು ನಾನು ಪುನರುಚ್ಚರಿಸುತ್ತೇನೆ, ಯಾವುದೇ ಕೇಂದ್ರ ಸಂಸ್ಥೆಯು 10 ಪೈಸೆಗಳ ಯಾವುದೇ ಅಕ್ರಮ ವಹಿವಾಟಿನಲ್ಲಿ ನನ್ನ ಪಾತ್ರ ಸಾಬೀತುಪಡಿಸಿದರೆ ಯಾವುದೇ ಸಿಬಿಐ ಅಥವಾ ಇಡಿ ನನ್ನ ವಿರುದ್ಧ ತನಿಖೆ ನಡೆಸುವ ಅಗತ್ಯವಿಲ್ಲ. ನಾನೇ ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ" ಎಂದು ಅವರು ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಸೆಪ್ಟೆಂಬರ್ 6 ರಂದು ದೆಹಲಿಯಲ್ಲಿ ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಬ್ಯಾನರ್ಜಿಗೆ ಇಡಿ ಸಮನ್ಸ್ ನೀಡಿದೆ.

SCROLL FOR NEXT