ಸಾಂದರ್ಭಿಕ ಚಿತ್ರ 
ದೇಶ

ಕೊಂಚ ತಗ್ಗಿದ ಕೊರೋನಾ ಅಬ್ಬರ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 38,948 ಸಕ್ರಿಯ ಕೇಸು, 219 ಮಂದಿ ಸಾವು

ಕೊರೋನಾ ಮೂರನೇ ಅಲೆ ಭೀತಿ ನಡುವೆಯೇ ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಮೊನ್ನೆಗಿಂತ ಸ್ವಲ್ಪ ಕಡಿಮೆಯಾಗಿದೆ.

ನವದೆಹಲಿ: ಕೊರೋನಾ ಮೂರನೇ ಅಲೆ ಭೀತಿ ನಡುವೆಯೇ ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಮೊನ್ನೆಗಿಂತ ಸ್ವಲ್ಪ ಕಡಿಮೆಯಾಗಿದೆ. ಕಳೆದ 1 ದಿನದಲ್ಲಿ ದೇಶದಲ್ಲಿ 38 ಸಾವಿರದ 948 ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 219 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೃಢಪಡಿಸಿದೆ.

ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿಯ 30 ಲಕ್ಷದ 27 ಸಾವಿರದ 621ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4 ಲಕ್ಷದ 40 ಸಾವಿರದ 752ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4 ಲಕ್ಷದ 04 ಸಾವಿರದ 874ರಲ್ಲಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ವರದಿಯಾದ 38,948 ಹೊಸ ಪ್ರಕರಣಗಳು ಮತ್ತು 219 ಸಾವುಗಳಲ್ಲಿ, ಕೇರಳ ರಾಜ್ಯದಲ್ಲಿ 26,701 ಪ್ರಕರಣಗಳು ಮತ್ತು ನಿನ್ನೆ 74 ಸಾವುಗಳನ್ನು ಕಂಡಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 43 ಸಾವಿರದ 903 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3 ಕೋಟಿಯ 21 ಲಕ್ಷದ 81 ಸಾವಿರದ 995ಕ್ಕೆ ತಲುಪಿದೆ. 

ಕಳೆದ 73 ದಿನಗಳಲ್ಲಿ ವಾರದ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಶೇಕಡಾ 2.58ರಷ್ಟಿದ್ದು, ದಿನಂಪ್ರತಿಯ ಪಾಸಿಟಿವ್ ದರ ಶೇಕಡಾ 2.76ರಷ್ಟು ಕಳೆದ 7 ದಿನಗಳಲ್ಲಿ ದಾಖಲಾಗಿದೆ. ಇದುವರೆಗೆ ದೇಶದಲ್ಲಿ 53.14 ಕೋಟಿ ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು ರಾಷ್ಟ್ರಾದ್ಯಂತ ಲಸಿಕಾ ಅಭಿಯಾನದಲ್ಲಿ 68.75 ಕೋಟಿ ಡೋಸ್ ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!