ದೇಶ

ಕಾಶ್ಮೀರ: ರಜೌರಿ ಜಿಲ್ಲೆಯಲ್ಲಿ 12,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ

Lingaraj Badiger

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಶಾಲೆಗಳನ್ನು ಪುನರಾರಂಭಿಸುವ ಮುನ್ನ 12,000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕೋವಿಡ್ -19 ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಸೋಮವಾರ ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಜಿಲ್ಲೆಯ ಶಾಲೆಗಳನ್ನು ಪುನರಾರಂಭಿಸಲು ಶಿಕ್ಷಣ ಇಲಾಖೆಯು ಮಾಡಿರುವ ವ್ಯವಸ್ಥೆಗಳ ಪರಿಶೀಲನಾ ಸಭೆ ನಡೆಸಿದ ರಜೌರಿ ಜಿಲ್ಲಾಧಿಕಾರಿ ರಾಜೇಶ್ ಕೆ ಶವನ್ ಅವರು ಈ ನಿರ್ಧಾರವನ್ನು ತಿಳಿಸಿದ್ದಾರೆ ಎಂದು ವಕ್ತಾರರು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಆಡಳಿತವು ಭಾನುವಾರ ಕೆಲವು ಷರತ್ತುಗಳೊಂದಿಗೆ 10 ಮತ್ತು 12 ನೇ ತರಗತಿಗಳಿಗೆ ಕಾಲೇಜ್ ಗಳು ಮತ್ತು ಶಾಲೆಗಳನ್ನು ಪುನಃ ತೆರೆಯಲು ಅನುಮತಿ ನೀಡಿದೆ ಮತ್ತು ರಾತ್ರಿ ಕರ್ಫ್ಯೂ ಸೇರಿದಂತೆ ಹೆಚ್ಚಿನ COVID-19 ಕಂಟೈನ್‌ಮೆಂಟ್ ಮಾರ್ಗಸೂಚಿಗಳನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ.

ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೋವಿಡ್ ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಶಾಲೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದ್ದಾರೆ.

ಎಲ್ಲಾ ವಿದ್ಯಾರ್ಥಿಗಳಿಗೆ ಆದಷ್ಟು ಬೇಗ ಕೋವಿಡ್ ಪರೀಕ್ಷೆ ಮಾಡುವಂತೆ ಮತ್ತು ಎರಡು ದಿನಗಳಲ್ಲಿ ಶಾಲೆಗಳು ಪುನರಾರಂಭವಾಗುವಂತೆ ನೋಡಿಕೊಳ್ಳುವಂತೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

SCROLL FOR NEXT