ಗೆಹನಾ ವಸಿಷ್ಠ 
ದೇಶ

ಅಶ್ಲೀಲ ಚಿತ್ರ ಪ್ರಕರಣ: ಬಾಲಿವುಟ್ ನಟಿ ಗೆಹನಾ ವಸಿಷ್ಠ ಜಾಮೀನು ಅರ್ಜಿ ವಜಾ, ಸುಪ್ರೀಂ ಮೆಟ್ಟಿಲೇರಲು ನಟಿ ಪರ ವಕೀಲರ ನಿರ್ಧಾರ

ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಬಾಲಿವುಟ್ ನಟಿ ಗೆಹನಾ ವಸಿಷ್ಠ ಅವರ ಜಾಮೀನು ಅರ್ಜಿಯನ್ನು ಬಾಂಬೇ ಹೈಕೋರ್ಟ್ ವಜಾಗೊಳಿಸಿದೆ.

ಮುಂಬೈ: ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಬಾಲಿವುಟ್ ನಟಿ ಗೆಹನಾ ವಸಿಷ್ಠ ಅವರ ಜಾಮೀನು ಅರ್ಜಿಯನ್ನು ಬಾಂಬೇ ಹೈಕೋರ್ಟ್ ವಜಾಗೊಳಿಸಿದೆ.

ಇಂದು ಬಾಂಬೇ ಹೈಕೋರ್ಟ್ ನಲ್ಲಿ ನಡೆದ ಜಾಮೀನು ಅರ್ಜಿ ವಿಚಾರಣೆ ವೇಳೆ ಕೋರ್ಟ್ ನಟಿ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಹೀಗಾಗಿ ಆಕೆಯ ಪರ ವಕೀಲರು ಇದೀಗ ಸುಪ್ರೀಂ ಕೋರ್ಟ್ ನಲ್ಲಿ ಈ ಕುರಿತು ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ.

ಇನ್ನು ಅಶ್ಲೀಲ ಚಿತ್ರ ನಿರ್ಮಾಣ ಮತ್ತು ವೆಬ್ ಸೈಟ್ ಗೆ ಅಪ್ಲೋಡ್ ಮಾಡುವ ಹಗರಣದಲ್ಲಿ ನಟಿ ಗೆಹನಾ ವಸಿಷ್ಠ್ ಅವರ ಹೆಸರು ಬಲವಾಗಿ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಮುಂಬೈ ಅಪರಾಧ ವಿಭಾಗದ ಮುಂಬಯಿ ಪ್ರಾಪರ್ಟಿ ಸೆಲ್ ಅವರನ್ನು ಬಂಧಿಸಿತ್ತು.

ತಮ್ಮ ಅಶ್ಲೀಲ ಚಿತ್ರದಲ್ಲಿ ನಟಿಸುವಂತೆ ಆ ಚಿತ್ರದ ನಿರ್ದೇಶಕಿ ಕೂಡ ಆಗಿದ್ದ ಗೆಹನಾ ವಸಿಷ್ಠ ಅವರು, ಮಹಿಳೆಯೋರ್ವರನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ವಿಡಿಯೋವನ್ನು ಎಡಿಟ್ ಮಾಡಿ ಅಪ್ಲೋಡ್ ಮಾಡಲಾಗುವುದು ಎಂದು ಹೇಳಿ ಮಹಿಳೆ ನಟಿಸುವಂತೆ ಮಾಡಿದ್ದ ಗೆಹನಾ ಬಳಿಕ ಅದನ್ನು ಎಡಿಟ್ ಮಾಡದೇ ಅಪ್ಲೋಡ್ ಮಾಡಿದ್ದಾರೆ ಎಂದು ಮಹಿಳೆ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಈಗಾಗಲೇ ಎಡಿಟ್ ಮಾಡದ ಹಲವು ಅಶ್ಲೀಲ ಚಿತ್ರಗಳನ್ನು ಗೆಹನಾ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. 

ಮಿಸ್ ಏಷ್ಯಾ ಬಿಕಿನಿ ವಿಜೇತೆ ಕೂಡ ಆಗಿರುವ ಗೆಹನಾ ಆಲ್ಟ್ ಬಾಲಾಜಿ ವೆಬ್ ಸರಣಿ ಗಂದಿ ಬಾತ್ ನ ಮೂಲಕ ಹೆಸರುವಾಸಿಯಾಗಿದ್ದಾರೆ. ಇದರ ಹೊರತಾಗಿ, ಅವರು ಕೆಲವು ಹಿಂದಿ ಮತ್ತು ತೆಲುಗು ಚಲನಚಿತ್ರಗಳು ಮತ್ತು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!