ರಾಹುಲ್ ಗಾಂಧಿ 
ದೇಶ

'ಸ್ವಂತ ಗೂಡು ಕಟ್ಟದೇ ಮತ್ತೊಬ್ಬರ ಹೆಗಲನ್ನು ಆಶ್ರಯಿಸುವ ರಾಹುಲ್, ಭಾರತ ರಾಜಕಾರಣದ ರಾಜಕೀಯ ಕೋಗಿಲೆ’ 

ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ‘ಭಾರತದ ರಾಜಕಾರಣದ ರಾಜಕೀಯ ಕೋಗಿಲೆ’ ಎಂದು ಬಿಜೆಪಿ ಟೀಕಿಸಿದೆ.

ನವದೆಹಲಿ: ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ‘ಭಾರತದ ರಾಜಕಾರಣದ ರಾಜಕೀಯ ಕೋಗಿಲೆ’ ಎಂದು ಬಿಜೆಪಿ ಟೀಕಿಸಿದೆ.

ಸೋಮವಾರ  ಮಾತನಾಡಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ‘ರಾಹುಲ್ ತಳಮಟ್ಟದಲ್ಲಿ ಕೆಲಸ ಮಾಡುವುದಿಲ್ಲ. ಅವರು ತಮ್ಮ ರಾಜಕೀಯ ಕಾರ್ಯಸೂಚಿಗಾಗಿ ಮತ್ತೊಬ್ಬರ ಹೆಗಲನ್ನು ಬಳಸುತ್ತಾರೆ. ‘ಹೇಗೆ ಕೋಗಿಲೆ ತನ್ನ ಸ್ವಂತ ಗೂಡು ಕಟ್ಟಿಕೊಳ್ಳದೇ ಮತ್ತೊಬ್ಬರ ಗೂಡನ್ನು ಆಶ್ರಯಿಸುತ್ತದೋ, ಅಂತೆಯೇ ರಾಹುಲ್ ಕೂಡಾ ಕಷ್ಟಪಟ್ಟು ಕೆಲಸ ಮಾಡುವುದಿಲ್ಲ. ಅದಕ್ಕಾಗಿ ಮತ್ತೊಬ್ಬರ ಹೆಗಲನ್ನು ಆಶ್ರಯಿಸುತ್ತಾರೆ.

ರಾಹುಲ್ ಒಂದು ರೀತಿಯಲ್ಲಿ ಭಾರತದ ರಾಜಕೀಯ ಕೋಗಿಲೆ ಇದ್ದಂತೆ. ಕಾಂಗ್ರೆಸ್‌ಗೆ ಕಾಯಂ ಅಧ್ಯಕ್ಷರಿಲ್ಲ. ಸೋನಿಯಾ ಗಾಂಧಿ ಪಕ್ಷದ ಹಂಗಾಮಿ ಅಧ್ಯಕ್ಷೆಯಾಗಿದ್ದಾರೆ. ಹಾಗಾಗಿ, ಕಾಂಗ್ರೆಸ್‌ ನೆಲಮಟ್ಟದ ಸಮಸ್ಯೆಗಳನ್ನು ಪ್ರಶ್ನಿಸುವಲ್ಲಿ ವಿಫಲವಾಗಿದೆ. ಸೋನಿಯಾ ಅವರು ಇತರಪಕ್ಷಗಳೊಂದಿಗೆ ವರ್ಚುವಲ್ ಸಭೆ ನಡೆಸುತ್ತಾರೆ’ ಎಂದಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸುತ್ತಿರುವ ರೈತ ಒಕ್ಕೂಟಗಳ ಕುರಿತು ಪ್ರತಿಕ್ರಿಯಿಸಿದ ಸಂಬಿತ್, ‘ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆ ರೈತರಿಗೆ ಸಮರ್ಪಿತವಾಗಿದೆ. ಮುಂದೆಯೂ ಅವರು ಹಾಗೇ ಇರುತ್ತಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಗ್ರಾಹಕರಿಗೆ ಶಾಕ್: ಪೆಟ್ರೋಲ್, ಡೀಸೆಲ್ ದರ 5 ದಿನಗಳಲ್ಲಿ ಎರಡನೇ ಬಾರಿ ಏರಿಕೆ

Tamil Nadu: ಯಾವುದೇ ಸಮಯದಲ್ಲಿ TMK ಸರ್ಕಾರ ಪತನ, ರೆಡಿಯಾಗಿರಿ, ಡಿಎಂಕೆ ಕಾರ್ಯಕರ್ತರಿಗೆ ಸ್ಟಾಲಿನ್ ಕರೆ!

ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟ: ಕಂಜನ್ ದಾಳಿಯಿಂದ ಗಾಯಗೊಂಡಿದ್ದ 'ಮಾರ್ತಾಂಡ' ಸಾವು!

ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಧನ ಸಮಾವೇಶ: ಗಿನ್ನೆಸ್ ದಾಖಲೆಗೆ ತುಮಕೂರು ಸಜ್ಜು!

ಗಲ್ಫ್ ರಾಷ್ಟ್ರಗಳ ಮನವಿ: ಇರಾನ್ ಮೇಲಿನ ದಾಳಿ ಮುಂದೂಡಿದ ಡೊನಾಲ್ಡ್ ಟ್ರಂಪ್

SCROLL FOR NEXT