ದೇಶ

ಧನ್ಬಾದ್ ನ್ಯಾಯಾಧೀಶರ ಹಿಟ್ ಅಂಡ್ ರನ್ ಪ್ರಕರಣ: ಸೂಕ್ತ ಮಾಹಿತಿಗಾಗಿ 10 ಲಕ್ಷ ರೂ. ಬಹುಮಾನ ಘೋಷಿಸಿದ ಸಿಬಿಐ

Vishwanath S

ರಾಂಚಿ: ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಇನ್ನೂ ಸಿಕ್ಕಿಲ್ಲ. ಹೀಗಾಗಿ ಕೇಂದ್ರ ತನಿಖಾ ದಳ(ಸಿಬಿಐ) ಪ್ರಕರಣಕ್ಕೆ ಸಂಬಂಧಿಸಿದ ಮೌಲ್ಯಯುತ ಮಾಹಿತಿ ನೀಡುವುದಕ್ಕಾಗಿ ಇನಾಮವನ್ನು 5 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಿದೆ. 

ಕಳೆದ ಆಗಸ್ಟ್ 15 ರಂದು ಸಿಬಿಐ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ನೀಡಿದರೆ 5 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಈ ಪ್ರಕರಣದ ಸುಳಿವು ನೀಡುವವರಿಗೆ ಬಹುಮಾನ ಮೊತ್ತವನ್ನು 10 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂಬ ಪೋಸ್ಟರ್‌ಗಳನ್ನು ಧನ್ಬಾದ್ ನಾದ್ಯಂತ ಹಾಕಲಾಗಿದೆ ಎಂದು ಹೇಳಿದರು.

ಪೋಸ್ಟರ್‌ಗಳ ಪ್ರಕಾರ, ಧನ್ಬಾದ್ ನ್ಯಾಯಾಧೀಶರ ಕೊಲೆಗೆ ಸಂಬಂಧಿಸಿದ ಯಾವುದೇ ರೀತಿಯ ಜ್ಞಾನ ಅಥವಾ ಪ್ರಾಮುಖ್ಯತೆಯ ಮಾಹಿತಿಯನ್ನು ಹೊಂದಿದ್ದರೆ, ಅವನು/ಅವಳು ಅದನ್ನು ದಯಮಾಡಿ ಸಿಬಿಐ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಶುಕ್ಲಾ ಅವರಿಗೆ ನೀಡಬಹುದು. ಕೆಳಗೆ ನೀಡಿರುವ ದೂರವಾಣಿ ಸಂಖ್ಯೆಗಳಲ್ಲಿ. ಅಪರಾಧಕ್ಕೆ ಸಂಬಂಧಿಸಿದ ಉಪಯುಕ್ತ ಮಾಹಿತಿಯನ್ನು ನೀಡುವ ವ್ಯಕ್ತಿಗೆ ರೂ. 10 ಲಕ್ಷ ನಗದು ಬಹುಮಾನ ನೀಡಲಾಗುವುದು. ಮಾಹಿತಿದಾರರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಅದು ಹೇಳಿದೆ.

ಕಳೆದ ಜುಲೈ 28ರಂದು ನಿರ್ಜನ ರಸ್ತೆಯಲ್ಲಿ ನ್ಯಾಯಾಧೀಶ ಉತ್ತಮ್ ಆನಂದ್ ಅವರನ್ನು ಆಟೋ ರಿಕ್ಷಾ ಉದ್ದೇಶಪೂರ್ವಕವಾಗಿ ಹೊಡೆಯುತ್ತಿರುವ ಸಿಸಿಟಿವಿ ದೃಶ್ಯಾವಳಿಗಳು ಪತ್ತೆಯಾಗಿದ್ದು ಸಾವಿನ ಬಗ್ಗೆ ಅನುಮಾನ ಮೂಡಿಸಿತ್ತು.

SCROLL FOR NEXT