ದೇಶ

ಅಸ್ಸಾಂ: ಬ್ರಹ್ಮಪುತ್ರ ನದಿಯಲ್ಲಿ 100ಕ್ಕೂ ಹೆಚ್ಚು ಪ್ರಯಾಣಿಕರಿದ್ದ ದೋಣಿ ಫೆರ್ರಿಗೆ ಡಿಕ್ಕಿ, ಹಲವು ಮಂದಿ ಜಲಸಮಾಧಿ ಶಂಕೆ

Srinivas Rao BV

ಜೊರ್ಹಾತ್: ಅಸ್ಸಾಂ ನಲ್ಲಿ ಬ್ರಹ್ಮಪುತ್ರ ನದಿಯಲ್ಲಿ ದೋಣಿ ಫೆರ್ರಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ದೋಣೀಗಳು ಮುಳುಗಿ ಹಲವು ಮಂದಿ ಜಲಸಮಾಧಿಯಾಗಿರುವ ಶಂಕೆ ಇದೆ.

ಜೊರ್ಹಾತ್ ಜಿಲ್ಲೆಯ ನಿಮಾತಿ ಘಾಟ್ ನಲ್ಲಿ ಈ ಘಟನೆ ವರದಿಯಾಗಿದ್ದು, ಮಾ ಕಮಲ ದೋಣಿ ನಿಮಾತಿ ಘಾಟ್ ನಿಂದ ಮಜುಲಿಗೆ ಸಂಚರಿಸುತ್ತಿದ್ದಾಗ ಮಜುಲಿಯಿಂದ ವಾಪಸ್ಸಾಗುತ್ತಿದ್ದ ಸರ್ಕಾರಿ ಸ್ವಾಮ್ಯದ ಟ್ರಿಪ್ಕೈಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ದೋಣಿ ಮುಳುಗಿದ್ದು, ಈ ತಕ್ಷಣಕ್ಕೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ ಎಂದು ಐಡಬ್ಲ್ಯುಟಿ ಇಲಾಖೆಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

"ಮತ್ತೋರ್ವ ಅಧಿಕಾರಿಯ ಪ್ರಕಾರ ದೋಣಿಯಲ್ಲಿ 120 ಪ್ರಯಾಣಿಕರಿದ್ದರು. ಆದರೆ ತ್ರಿಪ್ಕೈನಿಂದಲೇ ಹಲವರನ್ನು ರಕ್ಷಿಸಲಾಗಿದೆ" ಎಂದು ಹೇಳಿದ್ದಾರೆ. ಈ ದುರ್ಘಟನೆಯಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಎನ್ ಡಿಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ಧಾವಿಸಿದ್ದು ಶೋಧಕಾರ್ಯಾಚರಣೆ ಪ್ರಾರಂಭಿಸಿವೆ. ಬೋಟ್ ನಲ್ಲಿ ದ್ವಿಚಕ್ರ ವಾಹನಗಳು ಹಾಗೂ ನಾಲ್ಕು ಚಕ್ರದ ವಾಹನಗಳನ್ನು ಸಾಗಿಸಲಾಗುತ್ತಿತ್ತು ಎಂಬ ಮಾಹಿತಿಯೂ ಲಭ್ಯವಾಗಿದೆ.

SCROLL FOR NEXT