ದೇಶ

ತಮಿಳುನಾಡಿನಲ್ಲಿ ಹಬ್ಬ, ರಾಜಕೀಯ ಸಮಾವೇಶ, ಧಾರ್ಮಿಕ ಸಭೆಗಳ ಮೇಲಿನ ನಿಷೇಧ ಅ. 31ರ ವರೆಗೆ ವಿಸ್ತರಣೆ

Lingaraj Badiger

ಚೆನ್ನೈ: ತಮಿಳುನಾಡಿನಲ್ಲಿ ಹಬ್ಬಗಳು, ರಾಜಕೀಯ ಸಮಾವೇಶ, ಸಮುದಾಯ ಮತ್ತು ಧಾರ್ಮಿಕ ಸಭೆ ಸಮಾರಂಭಗಳ ಮೇಲಿನ ನಿಷೇಧವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಗುರುವಾರ ಹೇಳಿದ್ದಾರೆ.

ನೆರೆಯ ರಾಜ್ಯ ಕೇರಳದಲ್ಲಿ ಕೊರೋನಾ ಸೋಂಕು ಹಾಗೂ ನಿಫಾ ವೈರಸ್ ಏಕಾಏಕಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿಷೇಧ ಹೇರಲಾಗಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಮೂರನೆ ಅಲೆಯನ್ನು ತಡೆಗಟ್ಟಲು ಜನ ತಮ್ಮ ತಮ್ಮ ಮನೆಗಳಲ್ಲಿ ಹಬ್ಬಗಳನ್ನು ಆಚರಿಸಬೇಕು ಎಂದು ಸಿಎಂ ಸ್ಟಾಲಿನ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಬುಧವಾರ 1,587 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ದೈನಂದಿನ ಪ್ರಕರಣಗಳಲ್ಲಿ ಸ್ವಲ್ಪ ಹೆಚ್ಚಳ ಖಂಡಿದೆ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 26,27,365 ಕ್ಕೆ ಏರಿಕೆಯಾಗಿದೆ.

SCROLL FOR NEXT