ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಉತ್ತರಾಖಂಡ ರಾಜ್ಯಪಾಲರಾಗಿ, ಲೆ.ಜ. ಗುರ್ಮಿತ್ ಸಿಂಗ್, ತಮಿಳುನಾಡು ರಾಜ್ಯಪಾಲರಾಗಿ ಆರ್ ಎನ್ ರವಿ ನೇಮಕ

ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ನಿವೃತ್ತರಾದ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಅವರನ್ನು ಉತ್ತರಾಖಂಡದ ರಾಜ್ಯಪಾಲರನ್ನಾಗಿ ಗುರುವಾರ ನೇಮಿಸಲಾಗಿದೆ.

ಆರ್ ಎನ್ ರವಿ
Lingaraj Badiger
Updated On : 9 Sept 2021, 11:47 pm

ನವದೆಹಲಿ: ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ನಿವೃತ್ತರಾದ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಅವರನ್ನು ಉತ್ತರಾಖಂಡದ ರಾಜ್ಯಪಾಲರನ್ನಾಗಿ ಗುರುವಾರ ನೇಮಿಸಲಾಗಿದೆ. ಬೇಬಿ ರಾಣಿ ಮೌರ್ಯ ಅವರು ಉತ್ತರಾಖಂಡ ರಾಜ್ಯಪಾಲೆ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಗುರ್ಮಿತ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.

ರಾಷ್ಟ್ರಪತಿ ಭವನದ ಪ್ರಕಟಣೆ ಪ್ರಕಾರ, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮೌರ್ಯ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದು, ಅವರ ಸ್ಥಾನಕ್ಕೆ ಗುರ್ಮಿತ್ ಸಿಂಗ್ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದೆ.

ಲೆಫ್ಟಿನೆಂಟ್ ಜನರಲ್ ಸಿಂಗ್ ಅವರು ಸುಮಾರು ನಾಲ್ಕು ದಶಕಗಳ ಸೇವೆಯ ನಂತರ 2016 ರ ಫೆಬ್ರವರಿಯಲ್ಲಿ ಸೇನೆಯಿಂದ ನಿವೃತ್ತರಾಗಿದ್ದರು. 

Advertisement

Advertisement

ಈ ಹೊಸ ನೇಮಕಾತಿ ಹೊರತಾಗಿಯೂ ರಾಷ್ಟ್ರಪತಿಗಳು ಕೆಲವು ರಾಜ್ಯಪಾಲರನ್ನು ವರ್ಗಾವಣೆ ಮಾಡಿದ್ದು, ಪಂಜಾಬ್ ಹೆಚ್ಚುವರಿ ರಾಜ್ಯಪಾಲರಾಗಿದ್ದ ಬನ್ವಾರಿಲಾಲ್ ಪುರೋಹಿತ್ ಅವರನ್ನು ತಮಿಳುನಾಡಿನಿಂದ ಪಂಜಾಬ್‌ಗೆ ವರ್ಗಾಯಿಸಲಾಗಿದೆ. 

ನಿವೃತ್ತ ಐಪಿಎಸ್ ಅಧಿಕಾರಿ ಆರ್.ಎನ್.ರವಿ ಅವರನ್ನು ನಾಗಾಲ್ಯಾಂಡ್ ನಿಂದ ತಮಿಳುನಾಡಿಗೆ ವರ್ಗಾಯಿಸಲಾಗಿದೆ.

ಪ್ರಸ್ತುತ ಅಸ್ಸಾಂನ ರಾಜ್ಯಪಾಲರಾಗಿರುವ ಜಗದೀಶ್ ಮುಖಿ ಅವರಿಗೆ ಹೆಚ್ಚುವರಿಯಾಗಿ ನಾಗಾಲ್ಯಾಂಡ್ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments