ರಾಜಸ್ಥಾನ: ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಆರೋಪಿಗಳು ಪರಾರಿ
ರಾಜಸ್ಥಾನದ ಅಳ್ವಾರ್ ಜಿಲ್ಲೆಯಲ್ಲಿ 21 ವರ್ಷದ ಮಹಿಳೆ ಮೇಲೆ ಚಲಿಸುತ್ತಿದ್ದ ಕಾರಿನಲ್ಲೇ ಇಬ್ಬರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಜೈಪುರ: ರಾಜಸ್ಥಾನದ ಅಳ್ವಾರ್ ಜಿಲ್ಲೆಯಲ್ಲಿ 21 ವರ್ಷದ ಮಹಿಳೆ ಮೇಲೆ ಚಲಿಸುತ್ತಿದ್ದ ಕಾರಿನಲ್ಲೇ ಇಬ್ಬರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಸದರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಈ ಘಟನೆ ನಡೆದಿದೆ.
"ಮಹಿಳೆ ತನ್ನ ಗಂಡನ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಸಿಲಿಸೆರ್ ಪ್ರದೇಶಕ್ಕೆ ಹೋಗುತ್ತಿದ್ದಾಗ ದಾರಿ ಮಧ್ಯೆ ಪೆಟ್ರೋಲ್ ಖಾಲಿಯಾಗಿದೆ. ಆ ವ್ಯಕ್ತಿ ಮಹಿಳೆಯನ್ನು ಬಿಟ್ಟು ತಾನು ಒಬ್ಬನೇ ಪೆಟ್ರೋಲ್ ಪಂಪ್ ಗೆ ತೆರಳಿದ್ದಾರೆ. ಈ ವೇಳೆ ಮಹಿಳೆ ಅದೇ ರಸ್ತೆಯಲ್ಲಿ ಬಂದ ಕಾರ್ ಗೆ ಲಿಫ್ಟ್ ಕೇಳಿದ್ದಾರೆ. ಆ ಕಾರಿನಲ್ಲಿ ಇಬ್ಬರು ಪುರುಷರ ಇಬ್ಬರು" ಎಂದು ಪೊಲೀಸರು ಹೇಳಿದ್ದಾರೆ.
"ಆರೋಪಿಗಳು ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಲಾಗಿದೆ. ಕಾರಿನಲ್ಲಿ ದೆಹಲಿ ನೋಂದಣಿ ನಂಬರ್ ಪ್ಲೇಟ್ ಇತ್ತು" ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಂತರ ಆರೋಪಿಗಳು ಪರಾರಿಯಾಗಿದ್ದು, ಅವರನ್ನು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.