ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

14 ಕಿ.ಮೀ ಕಾಲ್ನಡಿಗೆಯಲ್ಲೇ ಸಾಗಿ ವೈಷ್ಣೋದೇವಿ ದರ್ಶನ ಪಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಖ್ಯಾತ ಯಾತ್ರಾ ತಾಣ ವೈಷ್ಣೋದೇವಿ ದೇಗುಲಕ್ಕೆ ಭೇಟಿ ನೀಡಿದ್ದು, ಸುಮಾರು 14 ಕಿಮೀ ದೂರವನ್ನು ಕಾಲ್ನಡಿಗೆಯಲ್ಲೇ ಸಾಗಿ ಮಾತಾ ವೈಷ್ಣೋದೇವಿ ದರ್ಶನ ಪಡೆದಿದ್ದಾರೆ.

ವೈಷ್ಣೋದೇವಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ
Srinivasa Murthy VN
Updated On : 10 Sept 2021, 8:28 am

ಶ್ರೀನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಖ್ಯಾತ ಯಾತ್ರಾ ತಾಣ ವೈಷ್ಣೋದೇವಿ ದೇಗುಲಕ್ಕೆ ಭೇಟಿ ನೀಡಿದ್ದು, ಸುಮಾರು 14 ಕಿಮೀ ದೂರವನ್ನು ಕಾಲ್ನಡಿಗೆಯಲ್ಲೇ ಸಾಗಿ ಮಾತಾ ವೈಷ್ಣೋದೇವಿ ದರ್ಶನ ಪಡೆದಿದ್ದಾರೆ.

ಕಣಿವೆ ಪ್ರಾಂತ್ಯ ಜಮ್ಮುವಿನ ರಿಯಾಸಿ ಜಿಲ್ಲೆಯ ತ್ರಿಕುಟಾ ಬೆಟ್ಟದಲ್ಲಿರುವ ಹೆಸರಾಂತ ಯಾತ್ರಾ ಸ್ಥಳ ವೈಷ್ಣೋದೇವಿ ಗುಹೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕಾಲ್ನಡಿಗೆಯಲ್ಲಿ ಸಾಗಿದ್ದಾರೆ. ಜಮ್ಮುವಿನ ಕಟ್ರಾದಿಂದ ಇಲ್ಲಿಗೆ ಸುಮಾರು 14 ಕಿ.ಮೀ ದೂರವಿದಲ್ಲಿರುವ ವೈಷ್ಣೋದೇವಿ ಗುಹೆಗೆ ಕಾಲ್ನಡಿಗೆಯಲ್ಲಿ ಸಾಗಿದ  ರಾಹುಲ್‌ ಗಾಂಧಿ ಶುಕ್ರವಾರ ಬೆಳಗ್ಗೆ ದೇವಿಯ ದರ್ಶನ ಪಡೆದಿದ್ದಾರೆ.

ಪ್ರಯಾಣದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಹುಲ್‌, 'ನಾನು ವೈಷ್ಣೋಮಾತೆಗೆ ಪ್ರಾರ್ಥನೆ ಸಲ್ಲಿಸಲು ಬಂದಿದ್ದೇನೆ. ಈ ಸಮಯದಲ್ಲಿ ಯಾವುದೇ ರಾಜಕೀಯ ಹೇಳಿಕೆಗಳನ್ನು ನೀಡಲು ಬಯಸುವುದಿಲ್ಲ' ಎಂದು ತಿಳಿಸಿದ್ದಾರೆ. 

Advertisement

Advertisement

ಇನ್ನು ಈ ಯಾತ್ರೆ ವೇಳೆ ರಾಹುಲ್ ಗಾಂಧಿ ಅವರಿಗೆ ಇತರೆ ಯಾತ್ರಾರ್ಥಿಗಳು, ಸ್ಥಳೀಯ ಕಾಂಗ್ರೆಸ್‌ ಮುಖಂಡರು ಮತ್ತು ಭದ್ರತಾ ಸಿಬ್ಬಂದಿಗಳು ಸಾಥ್‌ ನೀಡಿದರು.

ರಾಹುಲ್ ಗಾಂಧಿ ಅವರು, 2 ದಿನಗಳ ಜಮ್ಮು ಪ್ರವಾಸದಲ್ಲಿದ್ದು, ಇದೇ ಹೊತ್ತಿನಲ್ಲೇ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದರು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments