ದೇಶ

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 34,973 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆ, 260 ಸಾವು

Srinivasamurthy VN

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ವೈರಸ್ ಏರಿಳಿತ ಪರಿಸ್ಥಿತಿ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 34,973 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಅಂತೆಯೇ ಇದೇ ಅವಧಿಯಲ್ಲಿ 260 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 34,973 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,31,74,954ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 260 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ  ಮೂಲಕ ಕೋವಿಡ್-19 ಸಾಂಕ್ರಾಮಿಕಕ್ಕೆ ಬಲಿಯಾದವರ ಸಂಖ್ಯೆ 4,42,009ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಗಳ ಅವದಿಯಲ್ಲಿ ದೇಶದಲ್ಲಿ 37,681 ಮಂದಿ ಸೋಂಕಿತರು ಗುಣಮುಖರಾಗಿದ್ದು ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದ ಒಟ್ಟಾರೆ ಸೋಂಕಿತರ ಸಂಖ್ಯೆ 3,23,42,299ಕ್ಕೆ ಏರಿಕೆಯಾದಂತಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 3,90,646 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ  ಇಲಾಖೆ ನೀಡಿರುವ ಹೆಲ್ತ್ ಬುಲೆಟಿನ್ ನಿಂದ ತಿಳಿದುಬಂದಿದೆ. ದೇಶಾದ್ಯಂತ ಕೋವಿಡ್ ಲಸಿಕೆ ಅಭಿಯಾನ ಕೂಡ ಮುಂದುವರೆದಿದ್ದು, ಈ ವರೆಗೂ ದೇಶಾದ್ಯಂತ 72,37,84,586 ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ.

ಇನ್ನು ನಿನ್ನೆ ದೇಶದಲ್ಲಿ ಪತ್ತೆಯಾಗುತ್ತಿರುವ ಒಟ್ಟಾರೆ ಸೋಂಕು ಪ್ರಕರಣಗಳ ಪೈಕಿ ಕೇರಳ ರಾಜ್ಯವೊಂದರಲ್ಲೇ ಶೇ.50ಕ್ಕೂ ಹೆಚ್ಚು ಪ್ರಮಾಣದ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ. ನಿನ್ನೆ ಕೇರಳದಲ್ಲಿ 26,200 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಅಂತೆಯೇ 114 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ  ಎಂದು ಕೇರಳ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

SCROLL FOR NEXT