ಸಂಗ್ರಹ ಚಿತ್ರ 
ದೇಶ

ರಾಜಸ್ಥಾನದಲ್ಲಿ ಭೀಕರ ಅಪಘಾತ: ಬಸ್​-ಬೊಲೆರೊ ನಡುವೆ ಡಿಕ್ಕಿ, 4 ಮಹಿಳೆಯರ ದುರ್ಮರಣ

ರಾಜಸ್ಥಾನ ರಾಜ್ಯದ ಬಾರ್ಮರ್'ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಹಾಗೂ ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. 

ಬಾರ್ಮರ್: ರಾಜಸ್ಥಾನ ರಾಜ್ಯದ ಬಾರ್ಮರ್'ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಹಾಗೂ ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. 

ಬೊಲೆರೋ ಕ್ಯಾಂಪರ್‌ನಲ್ಲಿ ರಾಜಸ್ಥಾನದ ಲೋಹಾವತ್‌ನಿಂದ ಸುಮಾರು 18 ಮಂದಿ ತಮ್ಮ ಮನೆಗಳಿಗೆ ಹಿಂದಿರುಗುತ್ತಿದ್ದ ವೇಳೆ ಬಸ್ ಅಪ್ಪಳಿಸಿದೆ. ಬಾರ್ಮೆರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 68ರಲ್ಲಿ ದುರ್ಘಟನೆ ಸಂಭವಿಸಿದ್ದು, ಸುಮಾರು 10 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. 10 ಮಂದಿ ಪೈಕಿ ಓರ್ವ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. 

ಬೊಲೆರೋ ಕ್ಯಾಂಪರ್‌ನಲ್ಲಿ ಲೋಹಾವತ್‌ನಿಂದ ಸುಮಾರು 18 ಮಂದಿ ತಮ್ಮ ಮನೆಗಳಿಗೆ ಹಿಂದಿರುಗುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 68ರಲ್ಲಿ ಬಂದ ಬಸ್ ಕ್ಯಾಂಪರ್​ಗೆ ಡಿಕ್ಕಿ ಹೊಡೆದಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಜೊತೆಗೆ ಸ್ಥಳಕ್ಕೆ ಭೇಟಿ ನೀಡಿದ ಬಾರ್ಮೆರ್ ಜಿಲ್ಲಾಧಿಕಾರಿ ಲೋಕ ಬಂಧು, ಪೊಲೀಸ್ ವರಿಷ್ಠಾಧಿಕಾರಿ ಆನಂದ ಶರ್ಮಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನರಪತ್ ಸಿಂಗ್, ಹೆಚ್ಚುವರಿ ಜಿಲ್ಲಾಧಿಕಾರಿ ಓಂಪ್ರಕಾಶ್ ವಿಷ್ಣೋಯ್ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT