ದೇಶ

ಅಹಮದಾಬಾದ್​ನಲ್ಲಿ ಸರ್ದಾರ್​ಧಾಮ್ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ

Manjula VN

ನವದೆಹಲಿ: ಅಹ್ಮದಾಬಾದ್ ನ ಸರ್ದಾರ್ ಧಾಮ್ ಭವನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಉದ್ಘಾಟಿಸಿದ್ದಾರೆ. 

ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿಯವರು ಇಂದು ಬೆಳಗ್ಗೆ 11 ಗಂಟೆಗೆ ಸರ್ದಾರ್​ಧಾಮ್​ ಭವನವನ್ನು ಉದ್ಘಾಟನೆ ಮಾಡಿದ್ದಾರೆ. 

ಇದೇ ವೇಳೆ ಸರ್ದಾರ್ಧಂ 2 ನೇ ಹಂತದ ಕನ್ಯಾ ಛತ್ರಾಲಯ (ಬಾಲಕಿಯರ ಹಾಸ್ಟೆಲ್)ದ ಭೂಮಿ ಪೂಜೆಯನ್ನೂ ನೆರವೇರಿಸಿದ್ದಾರೆ.

ಈ ಕುರಿತು ಪ್ರಧಾನಮಂತ್ರಿಗಳ ಕಚೇರಿ ಹೇಳಿಕೆ ಬಿಡುಗಡೆ ಮಾಡಿದ್ದು, ಸರ್ದಾರ್ ಧಾಮ್ ಶೈಕ್ಷಣಿಕ ಮತ್ತು ಸಾಮಾಜಿಕ ಪರಿವರ್ತನೆ, ಸಮಾಜದ ದುರ್ಬಲ ವರ್ಗಗಳ ಉನ್ನತಿ ಮತ್ತು ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದೆ.

ಅಹಮದಾಬಾದ್ನಲ್ಲಿ ಸ್ಥಾಪಿಸಲಾಗಿರುವ ಸರ್ದಾರ್ಧಂ ಭವನವು ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿದೆ. 2 ಸಾವಿರ ವಿದ್ಯಾರ್ಥಿನಿಯರು ಉಳಿದುಕೊಳ್ಳಲು ಅನುಕೂಲವಾಗುವ ಕನ್ಯಾ ಛತ್ರಾಲಯವನ್ನು ನಿರ್ಮಿಸಲಾಗುತ್ತಿದೆ.

ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಕೂಡ ಭಾಗವಹಿಸದ್ದರು ಎಂದು ತಿಳಿದುಬಂದಿದೆ.

SCROLL FOR NEXT