ಸಾಂದರ್ಭಿಕ ಚಿತ್ರ 
ದೇಶ

ನೋಯ್ಡಾ: ಅನೈತಿಕ ಸಂಬಂಧಕ್ಕಾಗಿ ಪತ್ನಿಯನ್ನು ಕೊಂದ ಬಾಂಗ್ಲಾದೇಶಿ ವ್ಯಕ್ತಿ ಬಂಧನ!

ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಪತ್ನಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಿದ ಆರೋಪದ ಮೇಲೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಮೂಲದ ವ್ಯಕ್ತಿಯೊರ್ವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೊಯ್ಡಾ: ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಪತ್ನಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಿದ ಆರೋಪದ ಮೇಲೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಮೂಲದ ವ್ಯಕ್ತಿಯೊರ್ವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, 40 ವರ್ಷದ ವ್ಯಕ್ತಿ ಭಾರತೀಯ ಪಾಸ್‌ಪೋರ್ಟ್ ಮತ್ತು  ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದಲ್ಲಿ ವಸತಿ ವಿಳಾಸಗಳನ್ನು ಬಳಸಿ ಎರಡು ಆಧಾರ್ ಕಾರ್ಡ್‌ಗಳನ್ನು ಖರೀದಿಸಿದ್ದಾನೆ.

ಮೃತ ಮಹಿಳೆ ಆರೋಪಿ ಬಾಬುಲ್ ಮಿಯಾನ್ ನ ಮೂರನೇ ಪತ್ನಿಯಾಗಿದ್ದು, ಮೊದಲ ಇಬ್ಬರು ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿದ್ದರು. ಬಾಬುಲ್ ಮಿಯಾನ್ ದಿನಗೂಲಿ ಕೆಲಸಗಾರರಾಗಿ ಕೆಲಸ ಮಾಡುತ್ತಿದ್ದು ಅವರ ಪತ್ನಿ ಫಾತಿಮಾ ಬೀಬಿ ಸ್ಥಳೀಯ ನಿರ್ಮಾಣ ಕೆಲಸದ ಗುತ್ತಿಗೆದಾರರೊಂದಿಗೆ ಸಂಬಂಧ ಹೊಂದಿದ್ದರು.

ಆಗಸ್ಟ್ 4ರಂದು, ಬಾಬುಲ್ ಬಂಗಾಳ ಪ್ರವಾಸದಿಂದ ಹಿಂದಿರುಗಿದಾಗ, ಫಾತಿಮಾ ಮತ್ತು ಗುತ್ತಿಗೆದಾರ ಸಾಜಿದ್ ಸರ್ಫಾಬಾದ್‌ನ ಅವರ ಮನೆಯಲ್ಲಿ ಒಟ್ಟಿಗೆ ಸಿಕ್ಕಿಬಿದ್ದಿದ್ದರೂ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಈ ವೇಳೆ ವಾಗ್ವಾದ ನಡೆದಿದ್ದು ಆತ ತನ್ನ ಪತ್ನಿಯನ್ನು ಹಾಸಿಗೆಯ ಮೇಲೆ ಎಳೆದು ಆಕೆಯು ಧರಿಸಿದ್ದ 'ಚುನ್ನಿ'ಯಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel