ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕಾರ 
ದೇಶ

ಗುಜರಾತಿನ 17 ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅಧಿಕಾರ ಸ್ವೀಕಾರ

ಗುಜರಾತ್ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಂತೆಯೇ ವಿಜಯ್ ರೂಪಾನಿ ಅಚ್ಚರಿ ರೀತಿಯಲ್ಲಿ ನಿರ್ಗಮನದ ನಂತರ ಮೊದಲ ಬಾರಿಗೆ ಶಾಸಕರಾಗಿರುವ ಭೂಪೇಂದ್ರ ಪಟೇಲ್ ಸೋಮವಾರ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

ಅಹಮದಬಾದ್: ಗುಜರಾತ್ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಂತೆಯೇ ವಿಜಯ್ ರೂಪಾನಿ ಅಚ್ಚರಿ ರೀತಿಯಲ್ಲಿ ನಿರ್ಗಮನದ ನಂತರ ಮೊದಲ ಬಾರಿಗೆ ಶಾಸಕರಾಗಿರುವ ಭೂಪೇಂದ್ರ ಪಟೇಲ್ ಸೋಮವಾರ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

ಭಾನುವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದ ಪಟೇಲ್(59) ಗುಜರಾತಿನ 17ನೇ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದರು. 

ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಅಚಾರ್ಯ ದೆವವ್ರತಾ ಭೂಪೇಂದ್ರ ಪಟೇಲ್ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.  ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಆಡಳಿತದ ರಾಜ್ಯಗಳ ಕೆಲ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು. 

ಇಂದು ಪಟೇಲ್ ಮಾತ್ರ ಪ್ರಮಾಣ ವಚನ ಸ್ವೀಕರಿಸಿದರು, ಇನ್ನೂ ಕೆಲವೇ ದಿನಗಳಲ್ಲಿ ಸಂಪುಟ ಸೇರಲಿರುವ ಸಚಿವರ ಹೆಸರನ್ನು ಅಂತಿಮಗೊಳಿಸಲಾಗುತ್ತದೆ ಎಂದು ಬಿಜೆಪಿ ಮೂಲಗಳು ಹೇಳಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT